ಚಿಕ್ಕಮಗಳೂರು: ಲಂಚಕ್ಕೆ ಕೈಯೊಡ್ದಿದಾಗಲೇ ಮೆಸ್ಕಾಂ ಜೆಇ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಜೆಇ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದವರು. ಗಂಗಕಲ್ಯಾಣ ಯೋಜನೆಗೆ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಚೇರಿಯಲ್ಲಿ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಿಕ್ಕಮಗಳೂರು ಲೋಕಾಯುಕ್ತ ಎಸ್ ಪಿ ಸ್ನೇಹಾ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಸದ್ಯ ಜೆಇ ಪ್ರಶಾಂತ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.