ಶಿವಮೊಗ್ಗ: ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ ಮೆಸ್ಕಾಂ ಇಲಾಖೆಯ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ದುರಸ್ತಿ ಮತ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6 ರಂದು ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ಪರಿಣಾಮವಾಗಿ ಸೆಪ್ಟೆಂಬರ್ 06 ಮತ್ತು ಸೆಪ್ಟೆಂಬರ್ 7 ರಂದು ಶಿವಮೊಗ್ಗ ನಗರಾದ್ಯಂತ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಅಗತ್ಯಕ್ಕೆ ತಕ್ಕಷ್ಟು ನೀರನ್ನು ಶೇಖರಿಸಿಟ್ಟುಕೊಂಡು ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಕೆಯುಡಬ್ಲ್ಯು ಎಸ್&ಡಿಬಿ) ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.

