HomeKarnatakaಗೃಹ ಸಚಿವ ಅಮಿತ್ ಶಾ ಭೇಟಿಗೆ ತೆರಳುತ್ತಿದ್ದ MES ಪುಂಡರನ್ನು ತಡೆದ ಕರ್ನಾಟಕ ಪೊಲಿಸರು

ಗೃಹ ಸಚಿವ ಅಮಿತ್ ಶಾ ಭೇಟಿಗೆ ತೆರಳುತ್ತಿದ್ದ MES ಪುಂಡರನ್ನು ತಡೆದ ಕರ್ನಾಟಕ ಪೊಲಿಸರು

ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಲೆಂದು ತೆರಳುತ್ತಿದ್ದ ಎಂಇಎಸ್ ಪುಂಡರನ್ನು ಕರ್ನಾಟಕ ಪೊಲೀಸರು ಮಾರ್ಗ ಮಧ್ಯೆಯೇ ತಡೆದಿರುವ ಘಟನೆ ನಡೆದಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿಷಯ ಮಾತನಾಡಲು ಹೋರಟ್ಟಿದ್ದ ಬೆಳಗಾವಿಯ ಎಂಇಎಸ್ ಪುಂಡರನ್ನು ಬೆಳಗಾವಿ ಪೊಲೀಸರು ಹತ್ತರಗಿ ಟೋಲ್‌ನಲ್ಲಿ ತಡೆದಿದ್ದಾರೆ.

ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕರು ಮತ್ತು ಕಾರ್ಯಕರ್ತರ ನಿಯೋಗವು ವಿವಿಧ ವಾಹನಗಳಲ್ಲಿ ಕೊಲ್ಲಾಪುರಕ್ಕೆ ತೆರಳಿತ್ತಿದ್ದರು. ಈ ವೇಳೆ ಕರ್ನಾಟಕ ಪೊಲೀಸರು ಹತ್ತರಗಿ ಟೋಲ್ ಗೇಟ್‌ನಲ್ಲಿ ಎಂಇಎಸ್ ವಾಹನಗಳನ್ನು ತಡೆದಿದ್ದಾರೆ. ಮುಂದೆ ತೆರಳಲು ಬಿಟ್ಟಿಲ್ಲ ಎಂದು ಪೊಲೀಸರ ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತು ಎಂಇಎಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದರು. ಇದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಲ್ಹಾಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಭದ್ರತಾ ಕಾರಣಗಳಿಗಾಗಿ ಬೆಳಗಾವಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ನಂತರ ಎಂಇಎಸ್ ನಾಯಕರನ್ನು ತಡೆಯಲಾಗಿದೆ. ಆದರೆ, ಸಮಿತಿಯ ನಾಯಕರು ಈ ಬಗ್ಗೆ ಲಿಖಿತ ಆದೇಶವನ್ನು ತೋರಿಸಲು ಒತ್ತಾಯಿಸಿದರು. ಪೊಲೀಸರು ಅದನ್ನು ನೀಡಲು ನಿರಾಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular