ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 4 ದಿನ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 29 ರಿಂದ ಜುಲೈ 2 ರವರೆಗೆ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆ ಆಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿ ಇರಲಿದೆ. ಒಳನಾಡಿನ ಜಿಲ್ಲೆಗಳಲ್ಲಿ 40 ರಿಂದ 50 ಕಿ.ಮೀ. ವೇಗದ ಗಾಳಿ ಇರಲಿದೆ ಎಂದು ಹೇಳಲಾಗಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಪ್ರಮಾಣ ಇಳಿಮುಖವಾಗಿದ್ದು, ಬಹುತೇಕ ಭಾಗದಲ್ಲಿ ಕೃಷಿ ಚಟುವರಿಕೆ ಬಿರುಸು ಪಡೆದುಕೊಂಡಿವೆ.