HomeKarnatakaವಾಯುಭಾರ ಕುಸಿತ ಪರಿಣಾಮ ನಾಲ್ಕೈದು ದಿನ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ವಾಯುಭಾರ ಕುಸಿತ ಪರಿಣಾಮ ನಾಲ್ಕೈದು ದಿನ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ 4-5 ದಿನ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 5, 6 ರಂದು ಭಾರೀ ಮಳೆಯಾಗುವ ಸಂಭವ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜನವರಿ 5ರಂದು ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರಿನಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ರಾಜ್ಯದಾದ್ಯಂತ ಮುಂದಿನ 4 ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಉಷ್ಣಾಂಶ ಕುಸಿತವಾಗಿ ಶೀತದ ವಾತಾವರಣ ಇರಲಿದೆ. ಹಾಸನ ಸೇರಿದಂತೆ ರಾಜ್ಯದ ಹಲವು ಕಡೆ ಗುರುವಾರ ಮಳೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular