HomeKarnatakaರಾಜ್ಯದಲ್ಲಿ ಮುಂದಿನ ಮೂರು ದಿನ ತುಂತುರು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಮೂರು ದಿನ ತುಂತುರು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಅಲ್ಲಲ್ಲಿ ತುಂತುರು ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಿಂಗಾರು ಮಳೆ ಮಾರುತಗಳ ಪ್ರಭಾವದಿಂದ ಈಗಾಗಲೇ ಬೆಂಗಳೂರು ಸೇರಿ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ ಜಿಲ್ಲೆಗಳ ಅಲ್ಲಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಡಿಸೆಂಬರ್ 26, 27ರಂದು ಉತ್ತರ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆ ಮುಂದುವರೆಯುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular