HomeLatest Newsರಾಜ್ಯದಲ್ಲಿ ಹೆಚ್ಚಾದ ಚಳಿ, ಶೀತಗಾಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ಹೆಚ್ಚಾದ ಚಳಿ, ಶೀತಗಾಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ನವೆಂಬರ್ ಆರಂಭದಲ್ಲೇ ರಾಜ್ಯದಲ್ಲಿ ಚಳಿಯು ವಾತಾವರಣ ಕಂಡು ಬಂದಿದೆ. ದಿನೇ ದಿನೇ ಚಳಿಯ ಪ್ರಮಾಣ ಹೆಚ್ಚಾಗತೊಡಗಿದ್ದು, ಬೆಂಗಳೂರು ಸೇರಿ 10ಕ್ಕೂ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದೆ.

‘ಮೊಂಥಾ’ ಚಂಡಮಾರುತದ ನಂತರ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಬೀದರ್, ಬೆಳಗಾವಿ, ತುಮಕೂರು, ಚಾಮರಾಜನಗರ ಮೊದಲಾದ ಕಡೆಗಳಲ್ಲಿ ಬೆಳಗಿನ ಉಷ್ಣಾಂಶ ತೀವ್ರ ಕುಸಿತವಾಗಿದೆ.

ವಾಯು ವಿಹಾರಕ್ಕೆ ಹೋಗುವವರು ಟೋಪಿ, ಸ್ವೆಟರ್, ಬೆಚ್ಚನೆಯ ಉಡುಪು ಧರಿಸಿ ಓಡಾಡುತ್ತಿದ್ದಾರೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆ ಇದೆ. ಈ ಬಾರಿ ವಾಡಿಕೆ ಇಲ್ಲವೇ ವಾಡಿಕೆಗಿಂತ ಹೆಚ್ಚು ಚಳಿಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾನ್ಯವಾಗಿ ನವೆಂಬರ್ ಕೊನೆಯ ವಾರ ಇಲ್ಲವೇ ಡಿಸೆಂಬರ್ ಮೊದಲ ವಾರ ಚಳಿಗಾಲ ಶುರುವಾಗುತ್ತದೆ. ಈ ಬಾರಿ ನವೆಂಬರ್ ಮೊದಲ ವಾರವೇ ಚಳಿಯ ತೀವ್ರತೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಂಭವ ಇದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular