HomeKarnatakaಮೇ 28 ರವರೆಗೆ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನ ಬಹುತೇಕ ಕಡೆ ಮಳೆ

ಮೇ 28 ರವರೆಗೆ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನ ಬಹುತೇಕ ಕಡೆ ಮಳೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಕಡೆ ಮೇ 28ರ ವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಹಾಸನ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ದಾವಣಗೆರೆ, ತುಮಕೂರು, ಮಂಡ್ಯ, ವಿಜಯನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular