HomeLatest NewsBIG NEWS: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಮುಲ್ ಮಳಿಗೆಗೆ ಅವಕಾಶ: ಡಿಕೆಶಿಯ ನವರಂಗಿ ಆಟ ಮತ್ತೊಮ್ಮೆ...

BIG NEWS: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಮುಲ್ ಮಳಿಗೆಗೆ ಅವಕಾಶ: ಡಿಕೆಶಿಯ ನವರಂಗಿ ಆಟ ಮತ್ತೊಮ್ಮೆ ಬಯಲು ಎಂದು JDS ಕಿಡಿ

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ ಎಂಬ ವಿಚಾರ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದೇ ವಿಚಾರವಾಗಿ ಕಿಡಿಕಾರಿರುವ ಜೆಡಿಎಸ್ ರಾಜ್ಯ ಘಟಕ ಇದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನವರಂಗಿ ಆಟ ಎಂದು ಕಿಡಿಕಾರಿದೆ.

ಕಮಿಷನ್‌ ಆಸೆಗೆ ಸ್ವಾಭಿಮಾನ ಮಾರಿಕೊಂಡ ಡಿ.ಕೆ.ಶಿವಕುಮಾರ್! ಡೂಪ್ಲಿಕೇಟ್‌ ಸಿಎಂ ಡಿಕೆಶಿಯ ನವರಂಗಿ ಆಟ ಮತ್ತೊಮ್ಮೆ ಬಯಲಾಗಿದೆ…ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಚುನಾವಣೆಗೂ ಮುಂಚೆ SaveNandini, ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ ಎಂದು ಪುಂಗೀ ಬಿಡುತ್ತಿದ್ದ ಡಿಕೆಶಿ, ಕಮಿಷನ್‌ ಆಸೆಗೆ ಇಂದು ಹೊರ ರಾಜ್ಯಗಳ ಹಾಲಿನ ಉತ್ಪನ್ನಗಳಿಗೆ ಮಣೆ ಹಾಕಿದ್ದಾರೆ… ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular