ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಜೊತೆ ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಯುವತಿ ವಿಧಾನಸೌಧದಿಂದ ಮೆಟ್ರೋ ಹತ್ತಿದ್ದರು. ಈ ವೇಳೆ ಮೆಟ್ರೋದಲ್ಲಿ ಪ್ರಯಾಣಿಸುತ್ತುದ್ದ ವೇಳೆ ವ್ಯಕ್ತಿಯೋರ್ವ ಯುವತಿಯ ಮೈ-ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಮೆಟ್ರೋದಿಂದ ಇಳಿಯುತ್ತಿದ್ದಂತೆ ಯುವತಿ ಅಲ್ಲಿದ್ದ ಭದ್ರತಾ ಸಿಬ್ಬಂದಿಗಳಿಗೆ ದೂರು ನೀಡಿದ್ದಾರೆ.
ತಕ್ಷಣ ವ್ಯಕ್ತಿಯನ್ನು ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ, ಆತನಿಕೆ ಬೈದು ಬುದ್ಧಿ ಹೇಳಿದ್ದಾರೆ. ಬೆಂಗಳೂರಿನ ಮೆಟ್ರೋದಲ್ಲಿ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಮಹಿಳೆಯರಿಗೆ ಮೆಟ್ರೋ ಕೂಡ ಸುರಕ್ಷಿತವಲ್ಲವೇ? ಎಂಬ ಆತಂಕ ಎದುರಾಗಿದೆ.

