ಬೆಂಗಳೂರಿಗೆ ಮೆಟ್ರೋ ನಗರ ಸ್ಥಾನಮಾನ ನೀಡಲ್ಲ: ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ದೇಶದ ದೊಡ್ಡ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ ಮೆಟ್ರೋ ನಗರದ ಸ್ಥಾನಮಾನ ನೀಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ 1962ರ ಆದಾಯ ತೆರಿಗೆ ಕಾಯ್ದೆಯ ನಿಯಮ 2ಎ ಅಡಿ ಮೆಟ್ರೋ ನಗರಗಳು ಹಾಗೂ ಇತರೆ ಪ್ರದೇಶಗಳಿಗೆ ವ್ಯತ್ಯಾಸವಿದೆ. ಹಾಲಿ ಇರುವ ನೀತಿಯಲ್ಲಿ ಯಾವುದೇ ಬದಲಾವಣೆ ಮಾಡುವ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ.

ಸದ್ಯ ದೇಶದಲ್ಲಿ ದೆಹಲಿ, ಮುಂಬೈ, ಕೊಲ್ಕತ್ತಾ, ಚೆನ್ನೈ ಮೆಟ್ರೋ ನಗರಗಳಾಗಿವೆ. ಮೆಟ್ರೋ ನಗರಗಳಲ್ಲಿ ವಾಸಿಸುವವರಿಗೆ ಕೆಲವು ತೆರಿಗೆ ವಿನಾಯಿತಿ ಸಿಗುತ್ತದೆ. ಮನೆ ಬಾಡಿಗೆ ಭತ್ಯೆಗೆ ಆದಾಯ ತೆರಿಗೆ ವಿನಾಯಿತಿ ಇರುತ್ತದೆ/ ಸದ್ಯ ಅದನ್ನು ತಡೆಹಿಡಿಯಲಾಗಿದೆ. ಇದರೊಂದಿಗೆ ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 10(13ಎ) ಅಡಿ ಮೆಟ್ರೋ ನಗರಗಳಲ್ಲಿ ತೆರಿಗೆ ವಿನಾಯಿತಿ ನೀಡುವಾಗ ಶೇಕಡ 50ರಷ್ಟು ಸಂಬಳ ಪರಿಗಣಿಸಲಾಗುತ್ತದೆ. ಬೆಂಗಳೂರಿನಂತಹ ನಗರಗಳಲ್ಲಿ 40% ರಷ್ಟು ವೇತನ ಪರಿಗಣಿಸಲಾಗುವುದು. ಕೇಂದ್ರ ಸರ್ಕಾರ ಬೆಂಗಳೂರಿಗೆ ಮೆಟ್ರೋ ಸ್ಥಾನಮಾನ ನೀಡಿದರೆ ಇಂತಹ ತೆರಿಗೆ ವಿನಾಯಿತಿಗಳು ಜನರಿಗೆ ಸಿಗಲಿವೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read