HomeLatest NewsBIG NEWS: ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಪ್ರಕರಣ: ಓರ್ವ ಗಾಯಾಳು ಚಿಕಿತ್ಸೆ...

BIG NEWS: ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಪ್ರಕರಣ: ಓರ್ವ ಗಾಯಾಳು ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಸಾವನ್ನಪ್ಪಿದ್ದಾರೆ.

ಬಿಡದಿ ಮೂಲದ ಜಯರಾಮ್ (57) ಮೃತ ದುರ್ದೈವಿ. ಕೆಂಗೇರಿಯ ಮಲ್ಲಸಂದ್ರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದಿತ್ತು. ಡ್ರೈವರ್, ಕಂಡಕ್ಟರ್ ಸೇರಿ 12 ಜನರು ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗಂಭೀರವಾಗಿ ಗಾಯಗೊಂಡಿದ್ದ ಜಯರಾಮ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಬಿಎಂಟಿಸಿ ಬಸ್ ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿತ್ತು. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular