ಬೆಂಗಳೂರು: ಬೆಂಗಳೂರಿಗರ ಜೀವನಾಡಿ ನಮ್ಮ ಮೆಟ್ರೋ ಇನ್ಮುಂದೆ ಕೇವಲ ಪ್ರಯಾಣಿಕರ ಸಾರಿಗೆ ಸಂಸ್ಥೆಯಾಗಿ ಉಳಿಯದೆ. ಆದಾಯಾಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಬೃಹತ್ ಯೋಜನೆಯನ್ನು ಹಮ್ಮಿಕೊಂಡಿದೆ.
ನಗರದಾದ್ಯಂತ ಇರುವ ಮೆಟ್ರೋ ಪಿಲ್ಲರ್ಗಳನ್ನು ವಾಣಿಜ್ಯ ಮತ್ತು ಡಿಜಿಟಲ್ ಜಾಹೀರಾತುಗಳಿಗೆ ಮುಕ್ತಗೊಳಿಸಲು ಬಿಎಂಆರ್‌ಸಿಎಲ್ ಮೆಗಾ ಟೆಂಡರ್ ಆಹ್ವಾನಿಸಿದೆ. ಆದರೆ, ಸರ್ಕಾರದ ಈ ನಿರ್ಧಾರವು ನಗರದ ಸೌಂದರ್ಯಕ್ಕೆ ಧಕ್ಕೆ ತರಲಿದೆ ಮತ್ತು ವಾಹನ ಸವಾರರ ಗಮನಕ್ಕೆ ಭಂಗವುಂಟುಮಾಡಲಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬಿಎಂಆರ್‌ಸಿಎಲ್‌ನ ಈ ವಾಣಿಜ್ಯೀಕರಣದ ನಿರ್ಧಾರಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಮೆಟ್ರೋ ಸಂಸ್ಥೆಯು ಕೇವಲ ಹಣ ಗಳಿಸುವುದನ್ನೇ ಉದ್ದೇಶವಾಗಿಟ್ಟುಕೊಂಡು ನಗರದ ಸೌಂದರ್ಯವನ್ನು ಹಾಳುಗೆಡವಲು ಹೊರಟಿದೆ. ರಾತ್ರಿ ವೇಳೆ ಈ ಪ್ರಕಾಶಮಾನವಾದ ಡಿಜಿಟಲ್ ಬೋರ್ಡ್‌ಗಳಿಂದಾಗಿ ವಾಹನ ಚಾಲನೆ ಮಾಡುವುದು ಕಷ್ಟವಾಗುತ್ತದೆ ಎಂದು ಆಡಳಿತ ಮಂಡಳಿಯ ವಿರುದ್ಧ ಕಿಡಿಕಾರಿದ್ದಾರೆ.
ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಂಆರ್‌ಸಿಎಲ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶ್ವಂತ್ ಚೌಹಾಣ್, ನಾವು ವಿಶ್ವ ದರ್ಜೆಯ ಸಂಘಟಿತ ಜಾಹೀರಾತು ಮಾದರಿಯನ್ನು ಜಾರಿಗೆ ತರುತ್ತಿದ್ದೇವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಸ್ಥಳೀಯ ಸಂಸ್ಥೆಗಳ ಕಠಿಣ ನಿಯಮಾವಳಿಗಳಿಗೆ ಒಳಪಟ್ಟೇ ಈ ಬೋರ್ಡ್‌ಗಳನ್ನು ಅಳವಡಿಸಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಒಟ್ಟಾರೆ ಬಿಎಂಆರ್‌ಸಿಎಲ್ ಸಂಸ್ಥೆಯು ಬೆಂಗಳೂರಿನ 5,000ಕ್ಕೂ ಹೆಚ್ಚು ಮೆಟ್ರೋ ಪಿಲ್ಲರ್‌ಗಳಲ್ಲಿ ಡಿಜಿಟಲ್ ಜಾಹೀರಾತು ಅಳವಡಿಸಲು ಟೆಂಡರ್ ಕರೆದಿದೆ. ಆರ್ಥಿಕವಾಗಿ ಸ್ವಾವಲಂಬಿಯಾಗಲು ಬಿಎಂಆರ್ ಸಿ ಎಲ್ ಸಂಸ್ಥೆ ಇಟ್ಟಿರುವ ಈ ಹೆಜ್ಜೆ, ರಸ್ತೆ ಸುರಕ್ಷತೆಯನ್ನು ಕಾಪಾಡುವಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸ್ ಮತ್ತು ಬಿಎಂಆರ್‌ಸಿಎಲ್‌ಗೆ ಅತಿ ದೊಡ್ಡ ಸವಾಲಾಗಿ ಪರಿಣಮಿಸಿದೆ.

