HomeKarnatakaಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕ್ಯೂಆರ್ ಕೋಡ್ ಆ್ಯಪ್ ಬಿಡುಗಡೆ ಶೀಘ್ರ

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕ್ಯೂಆರ್ ಕೋಡ್ ಆ್ಯಪ್ ಬಿಡುಗಡೆ ಶೀಘ್ರ

ಬೆಂಗಳೂರು: ಮೆಟ್ರೋ ಬಳಕೆದಾರರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಪ್ರಯಾಣಿಕರ ಅನುಕೂಲಕ್ಕಾಗಿ ಕ್ಯೂಆರ್ ಕೋಡ್ ವ್ಯವಸ್ಥೆ ತರಲು BMRCL ಮುಂದಾಗಿದೆ.

ನಮ್ಮ ಮೆಟ್ರೋದಲ್ಲಿ ಈಗಾಗಲೇ ಕ್ಯೂಆರ್ ಕೋಡ್ ವ್ಯವಸ್ಥೆ ಇದೆ. ಆದರೆ, ಅಸ್ತಿತ್ವದಲ್ಲಿರುವ ಎಲ್ಲಾ ಅಪ್ಲಿಕೇಶನ್ ಗಳಿಗೆ ಕ್ಯೂಆರ್ ಕೋಡ್ ಹೊಂದಿಕೆ ಆಗುವುದಿಲ್ಲ. ಬದಲಾಗಿ ಕೆಲವು ಡಿಜಿಟಲ್ ಪೇಮೆಂಟ್ ಅಪ್ಲಿಕೇಶನ್ ಗಳೊಂದಿಗೆ ಮಾತ್ರ ಬಳಕೆಯಾಗುತ್ತಿವೆ. ಹೀಗಾಗಿ ಟಿಕೆಟ್, ಟೋಕನ್ ರಹಿತ ಚಾಲನೆಗೆ ಅವಕಾಶ ನೀಡಲು ಈ ಕ್ಯೂಆರ್ ಕೋಡ್ ವ್ಯವಸ್ಥೆ ವಿಸ್ತರಿಸಲು ಬಿಎಮ್ಆರ್‌ಸಿಎಲ್ ನಿರ್ಧರಿಸಿದೆ.

ಭಾರತ್ ಬಿಲ್ ಪೇ ಸಿಸ್ಟಮ್ ಮಾದರಿಯ ಅಪ್ಲಿಕೇಶನ್ ವಿನ್ಯಾಸಕ್ಕೆ ಟೆಂಡರ್ ಪ್ರಕ್ರಿಯೆ ಆರಂಭಿಸಿದ್ದು, ಮೆಟ್ರೋ ಪ್ರಯಾಣಿಕರು ಈ ಮೂಲಕ ಮೆಟ್ರೋ ಟಿಕೆಟ್ ಗಳನ್ನು ಖರೀದಿಸಬಹುದು. ಅಲ್ಲದೇ ತಮ್ಮ ಸ್ಮಾರ್ಟ್ ಕಾರ್ಡ್ ಗಳನ್ನು ರಿಚಾರ್ಜ್ ಮಾಡಬಹುದು. ಆಟೋ ರಿಕ್ಷಾ ಮತ್ತು ಕ್ಯಾಬ್ ಗಳನ್ನು ಕೂಡ ಬುಕ್ ಮಾಡಬಹುದಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular