HomeLatest NewsBREAKING: ಮೇಟ್ರೋ ನಿಲ್ದಾಣಗಳಲ್ಲಿ ಅಮುಲ್ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲು ಗ್ರೀನ್ ಸಿಗ್ನಲ್: 10 ನಿಲ್ದಾಣಗಳಲ್ಲಿ...

BREAKING: ಮೇಟ್ರೋ ನಿಲ್ದಾಣಗಳಲ್ಲಿ ಅಮುಲ್ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲು ಗ್ರೀನ್ ಸಿಗ್ನಲ್: 10 ನಿಲ್ದಾಣಗಳಲ್ಲಿ ಕಿಯೋಸ್ಕ ಮಳಿಗೆ ತೆರೆಯಲು ನಿರ್ಧಾರ

ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲು ಬಿಎಂಆರ್ ಸಿ ಎಲ್ ಮುಂದಾಗಿದೆ. ಇದಕ್ಕೆ ಗ್ರೀನ್ ಸಿಗ್ನಲ್ ಕೂಡ ಸಿಕ್ಕಿದೆ ಎನ್ನಲಾಗಿದೆ.

ಗುಜರಾತ್ ನ ಅಮೂಲ್ ಉತ್ಪಾದನಾ ಕಂಪನಿಯೊಂದಿಗೆ ಬಿಎಂಆರ್ ಸಿಎಲ್ ಒಪ್ಪಂದ ಮಾಡಿಕೊಂಡಿದ್ದು, ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ ಮಳಿಗೆ ತೆರಲು ನಿರ್ಧರಿಸಿದೆ. ಕಿಯೋಸ್ಕ ಎಂದರೆ ಯಂತ್ರದ ಸಹಾಯದಿಂದ ಬಳಸುವ ಉಪಕರಣವಾಗಿದೆ.

ಪಟ್ಟಂದೂರು ಅಗ್ರಹಾರ ಮೆಟ್ರೋ ನಿಲ್ದಾಣ, ಇಂದಿರಾನಗರ, ಬೆನ್ನಿಗಾನಹಳ್ಳಿ, ಟ್ರಿನಿಟಿ, ಬೈಯ್ಯಪ್ಪನಹಳ್ಳಿ, ಸರ್.ಎಂ.ವಿಶ್ವೇಶ್ವರಯ್ಯ, ನ್ಯಾಷನಲ್ ಕಾಲೇಜು, ಬನಶಂಕರಿ ಮೆಟ್ರೋ ನಿಲ್ದಾಣ ಸೇರಿದಂತೆ ಹತ್ತು ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ತೆರಲು ಸಿದ್ಧತೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಎಂ ಆರ್ ಸಿಎಲ್ ಈ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ನಮ್ಮ ರಾಜ್ಯದ ನಂದಿನಿ ಉತ್ಪನ್ನಗಳಿಗೆ ಉತ್ತೇಜನ ನೀಡುವ ಬದಲು ಹೊರ ರಾಜ್ಯದ ಉತ್ಪನ್ನಗಳಿಗೆ ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರಲು ನಿರ್ಧರಿಸಿರುವುದು ಸರಿಯಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular