BIG NEWS: ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ; 4 ಬೈಕ್ ಗಳು ಸುಟ್ಟು ಕರಕಲು

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಈ ಅವಘಡ ಸಂಭವಿಸಿದೆ. ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಬೈಕ್ ಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು ನೋಡ ನೋಡುತ್ತಿದ್ದಂತೆ ಬೈಕ್ ಗಳು ಬೆಂಕಿಗಾಹುತಿಯಾಗಿವೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ನಾಲ್ಕು ಬೈಕ್ ಗಳು ಸುಟ್ಟು ಕರಕಲಾಗಿವೆ. ಇಂದು ಬೆಳಗಿನ ಜಾವ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read