HomeKarnatakaBIG NEWS: ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ; 4 ಬೈಕ್ ಗಳು ಸುಟ್ಟು ಕರಕಲು

BIG NEWS: ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ; 4 ಬೈಕ್ ಗಳು ಸುಟ್ಟು ಕರಕಲು

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಈ ಅವಘಡ ಸಂಭವಿಸಿದೆ. ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಬೈಕ್ ಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು ನೋಡ ನೋಡುತ್ತಿದ್ದಂತೆ ಬೈಕ್ ಗಳು ಬೆಂಕಿಗಾಹುತಿಯಾಗಿವೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ನಾಲ್ಕು ಬೈಕ್ ಗಳು ಸುಟ್ಟು ಕರಕಲಾಗಿವೆ. ಇಂದು ಬೆಳಗಿನ ಜಾವ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular