HomeLatest Newsಈ ತಿಂಗಳಾಂತ್ಯಕ್ಕೆ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಆರಂಭ

ಈ ತಿಂಗಳಾಂತ್ಯಕ್ಕೆ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಆರಂಭ

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ ತಿಂಗಳಾಂತ್ಯಕ್ಕೆ ಮೆಟ್ರೋ ನಿಲ್ದಾಣಗಳಲ್ಲಿ ಕೆಎಂಎಫ್ ನ ನಂದಿನಿ ಉತ್ಪನ್ನಗಳು ಸಿಗಲಿವೆ.

ಜುಲೈ ಅಂತ್ಯಕ್ಕೆ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಕೆಎಂಎಫ್ ನ ನಂದಿನಿ ಮಳಿಗೆ ಓಪನ್ ಮಾಡಲು ಬಿಎಂಆರ್ ಸಿಎಲ್ ಸಿದ್ಧತೆ ನಡೆಸಿದೆ.

ನಮ್ಮ ಮೆಟ್ರೋದ ಹತ್ತು ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಆರಂಭಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದರು. ಇದೀಗ ಆರಂಭಿಕ ಹಂತವಾಗಿ ಮೂರು ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಸಿದ್ಧತೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ, ಸೆಂಟ್ರಲ್ ಕಾಲೇಜು ಮೆಟ್ರೋ ನಿಲ್ದಾಣ ಹಾಗೂ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಆರಂಭವಾಗಲಿದೆ. ಈ ತಿಂಗಳಾಂತ್ಯ ಅಥವಾ ಆಗಸ್ಟ್ ಮೊದಲ ವಾರದಿಂದ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಉತ್ಪನ್ನ ಸಾರ್ವಜನಿಕರಿಗೆ ಲಭ್ಯವಿರಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್ ಎಂಡಿ ಶಿವಸ್ವಾಮಿ ಈಗಾಗಲೇ ಮೂರು ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಸೇವೆ ಆರಂಭಕ್ಕೆ ತಯಾರಿ ನಡೆಸಲಾಗುತ್ತಿದೆ. ಮುಂದಿನ ವಾರ ಉದ್ಘಾಟನೆಗೆ ಪ್ಲಾನ್ ಮಾಡಲಾಗಿದೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular