ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರದಿಂದಲೇ ಶಿಫಾರಸು: ಬಿಜೆಪಿ ಸಂಸದ ಬೊಮ್ಮಾಯಿ ಆರೋಪ

ಹುಬ್ಬಳ್ಳಿ: ಮೆಟ್ರೊ ಪ್ರಯಾಣದರ ಏರಿಸಲು ರಾಜ್ಯ ಸರ್ಕಾರವೇ ಕಾರಣ. ನಮ್ಮ ಮೇಟ್ರೋ ದರ ಹೆಚ್ಚಳಕ್ಕೆ ಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬೊಮ್ಮಾಯಿ, ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕೆ ಎಲ್ಲ ದರಗಳನ್ನೂ ಏರಿಸುತ್ತಿದೆ. ಮೆಟ್ರೋ‌ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳಿರುತ್ತಾರೆ. ಸಮಿತಿಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಹಣಕಾಸಿನ ನಿರ್ವಹಣೆಯಲ್ಲಿ ವಿಫಲವಾಗಿದೆ. ವಿದ್ಯುತ್, ನೀರು, ಹಾಲಿನ‌ ದರ ಸೇರಿದಂತೆ ಎಲ್ಲ ದರ ಏರಿಸಿದೆ. ಆರ್ಥಿಕವಾಗಿ ಸರ್ಕಾರ ದಿವಾಳಿಯಾಗಿದೆ ಎಂದರು.

ಇನ್ನು ಮೈಸೂರಿನ ಉದಯಗಿರಿ ಠಾಣೆ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿದ ಬಸವರಾಜ್ ಬೊಮ್ಮಾಯಿ, ಯಾವಾಗ ಸರ್ಕಾರ ಹಳೇ ಹುಬ್ಬಳ್ಳಿ ಪ್ರಕರಣವನ್ನು ಹಿಂತೆಗೆದುಕೊಂಡಿತೋ ಆಗ ಸರ್ಕಾರ ಯಾರ ಪರ ಇದೆ ಅನ್ನುವುದು ಗೊತ್ತಾಗಿದೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವುದರ ಹಿಂದೆ ಯಾರ ಕುಮ್ಮಕ್ಕು ಇದೆ ಅನ್ನುವುದು ಗೊತ್ತಾಗುತ್ತದೆ. ಈ‌ ಹಿಂದೆ ತನ್ವೀರ್ ಸೇಠ್ ಮೇಲೆ ಪಿಎಫ್ ಐ ದಾಳಿ ಮಾಡಿತ್ತು. ಇಂದು ಆ ಶಕ್ತಿಗಳು ಮತ್ತೆ ಒಂದಾಗಿವೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವವರೇ ಆತಂಕದಲ್ಲಿದ್ದಾರೆ. ಜನರಿಗೆ ರಕ್ಷಣೆ ಕೊಡುವ ಶಕ್ತಿಯೇ ಅವರಲ್ಲಿ‌ ಇಲ್ಲ. ಪೊಲೀಸರಿಗೆ ಎಲ್ಲವೂ ಗೊತ್ತಿದೆ. ಆದರೆ, ರಾಜಕೀಯ ಒತ್ತಡದಿಂದ ಕ್ರಮ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read