HomeKarnatakaಮೆಟ್ರೋ ಹಳಿ ಮೇಲೆ ಬಿದ್ದ ಮರ: ಕೆಲಕಾಲ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಮೆಟ್ರೋ ಹಳಿ ಮೇಲೆ ಬಿದ್ದ ಮರ: ಕೆಲಕಾಲ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಮೆಟ್ರೋ ಹಳಿ ಮೇಲೆ ಮರ ಬಿದ್ದು, ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯವವುಂತಾದ ಘಟನೆ ನಡೆದಿದೆ.

ಮೆಟ್ರೋ ಟ್ರ್ಯಾಕ್ ಮೇಲೆ ಮರ ಬಿದ್ದ ಪರಿಣಾಮ ನೇರಳೆ ಮಾರ್ಗದ ಮೆಟ್ರೋ ಸಂಚರದಲ್ಲಿ ಕೆಲ ಕಾಲ ವ್ಯತ್ಯಯವುಂಟಾಗಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ.

ಎಸ್.ವಿ ರಸ್ತೆ ಇಂದಿರಾನಗರ ನಡುವೆ ಹಳಿ ಮೇಲೆ ಮರ ಬಿದ್ದಿದೆ. ಇದರಿಂದಾಗಿ ಮೆಟ್ರೋ ಸಂಚರಕ್ಕೆ ತತ್ಕಾಲಿಕ ಅಡ್ಡಿಯಾಗಿತ್ತು. ಸದ್ಯ ಹಳಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಲಾಗಿದ್ದು, ಮತ್ತೆ ಮೆಟ್ರೋ ಸಂಚಾರ ಪುನರಾರಂಭಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular