ಮೆಟ್ರೋ ಹಳಿಗೆ ಹಾರಿದ ಯುವಕ; ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಯುವಕನೊಬ್ಬ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ಕೇರಳ ಮೂಲದ ಸರೋನ್ (23) ಮೆಟ್ರೋ ರೈಲು ಬರುವ ಸಮಯದಲ್ಲಿ ಏಕಾಏಕಿ ಹಳಿಗೆ ಜಿಗಿದಿದ್ದಾನೆ. ಇದನ್ನು ಗಮನಿಸಿದ ಬಿಎಂಆರ್ ಸಿಎಲ್ ಸಿಬ್ಬಂದಿ ತಕ್ಷಣ ವಿದ್ಯುತ್ ಸ್ಥಗಿತಗೊಳಿಸಿದ್ದಾರೆ. ರೈಲು ಹಾಗೂ ಪ್ಲಾಟ್ ಫಾರ್ಮ್ ನಡುವೆ ಸಿಲುಕಿಕೊಂಡಿದ್ದ ಯುವಕನನ್ನು ರಕ್ಷಿಸಿದ್ದಾರೆ.

ಯುವಕನ ತಲೆಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳು ಯುವಕನನ್ನು ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಎಂ ಆರ್ ಸಿ ಎಲ್ ಪಿಆರ್ ಒ ಬಿ.ಎಲ್.ಯಶವಂತ್ ಚವಾಣ್ ತಿಳಿಸಿದ್ದಾರೆ.

ಯುವಕನ ತಂದೆ ವಾರದ ಹಿಂದಷ್ಟೇ ಮೃತಪಟ್ಟಿದ್ದರು. ತಂದೆಯ ಕಾರ್ಯಗಳನ್ನು ಮುಗಿಸಿ ಬೆಂಗಳೂರಿಗೆ ಕೆಲಸಕ್ಕೆ ವಾಪಾಸ್ ಆದ ಯುವಕ ತಂದೆಯ ಅಗಲಿಕೆ ನೋವಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆಯಿಂದಾಗಿ 45 ನಿಮಿಷಗಳ ಕಾಲ ಯಶವಂತಪುರ-ನಾಗಸಂದ್ರ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು. ಕಳೆದ ಒಂದು ವಾರದಲ್ಲಿ ಮೆಟ್ರೋ ಹಳಿ ಮೇಲೆ ಹಾರಿದ ಎರಡನೇ ಪ್ರಕರಣ ಇದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read