ಬೆಂಗಳೂರು: ಮೆಟ್ರೋ ಕಾಮಗಾರಿ ನಡೆಸುತ್ತಿದ್ದ ವೇಳೆ ಮೆಟ್ರೋಗೆ ಬಳಸುವ ವಯಾಡೆಕ್ಟ್ ಬಿದ್ದು ಆಟೋ ಚಾಲಕ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮೃತನ ಮಾವ ಸೈಯದ್ ಖಾದರ್ ದೂರು ಆಧರಿಸಿ ಲಾರಿ ಚಾಲಕ, ಎನ್ ಸಿಸಿ ಕಂಪನಿ ಮ್ಯಾನೇಜರ್ ಹಾಗೂ ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಾಗಿದೆ.
ಯಲಹಂಕದ ಕೋಗಿಲು ಕ್ರಾಸ್ ಬಳಿ ಆಟೋ ಚಾಲಕ ಖಾಸಿಂ ಸಾಬ್ ಮೇಲೆ ಲಾರಿಯಲ್ಲಿ ಸಾಗಿಸುತ್ತಿದ್ದ ಮೆಟ್ರೋ ವಯಡೆಕ್ಟ್ ಬಿದ್ದು ಆಟೋಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದರು. ೨೦ ದಿನಗಳ ಹಿಂದಷ್ಟೇ ಸಾಲ ಮಾಡಿ ಖರೀದಿಸಿದ್ದ ಹೊಸ ಆಟೋ ಸಂಪೂರ್ಣ ಅಪ್ಪಚ್ಚಿಯಾಗಿದೆ. ಪ್ರಕರಣ ಸಂಬಂಧ ಇದೀಗ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.