ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರ ವಿಡಿಯೋ ಕ್ಲಿಕ್ಕಿಸಿ ಅಶ್ಲೀಲವಾಗಿ ಬಿಂಬಿಸಿ ಅಪ್ ಲೋಡ್ ಮಾಡಿ ವಿಕೃತಿ ಮೆರೆಯುತ್ತಿದ್ದ ಆರೋಪಿಯನ್ನು ಕೊನೆಗೂ ಬೆಂಗಳೂರಿನ ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಿಗಂತ್ ಬಂಧಿತ ಆರೋಪಿ. ಹಾಸನದ ಹೊಳೆನರಸೀಪುರ ಮೂಲದ ದಿಗಂತ್ ಬೆಂಗಳೂರಿನಲ್ಲಿ ವಾಸವಾಗಿದ್ದ. ಮೆಟ್ರೋದಲ್ಲಿ ಹುಡುಗಿಯರ ವಿಡಿಯೋ ರೆಕಾರ್ಡ್ ಮಾಡಿ ಅದನ್ನು ಆಕ್ಷೇಪಾರ್ಹವಾದ ರೀತಿಯಲ್ಲಿ ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡುತ್ತಿದ್ದ. ಇಂತಹ 13 ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿ ಹರಿಬಿಟ್ಟಿದ್ದ.
ಈ ಬಗ್ಗೆ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಎಫ್ಐಆರ್ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.