HomeLive Newsಮೆಟ್ರೋ ನಿಲ್ದಾಣದ ಪ್ಲಾಟ್ ಫಾರಂನಲ್ಲಿ ಮೂತ್ರ ವಿಸರ್ಜಿಸಿದ ವ್ಯಕ್ತಿ

ಮೆಟ್ರೋ ನಿಲ್ದಾಣದ ಪ್ಲಾಟ್ ಫಾರಂನಲ್ಲಿ ಮೂತ್ರ ವಿಸರ್ಜಿಸಿದ ವ್ಯಕ್ತಿ

ನವದೆಹಲಿ: ವ್ಯಕ್ತಿಯೋರ್ವ ಮೆಟ್ರೋ ನಿಲ್ದಾಣದ ಫ್ಲಾಟ್ ಫಾರಂ ನಲ್ಲಿಯೇ ಮೂತ್ರ ವಿಸರ್ಜನೆ ಮಾಡಿರುವ ಅನಾಗರಿಕ ಘಟನೆ ಬೆಳಕಿಗೆ ಬಂದಿದೆ.

ಪ್ರಯಾಣಿಕನಂತೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಆಸಾಮಿ, ದೆಹಲಿಯ ಮೆಟ್ರೋ ನಿಲ್ದಾಣದ ಪ್ಲಾಟ್ ಫಾರಂ ನಲ್ಲಿ ಮೂತ್ರ ವಿಸರ್ಜನೆ ಮಾಡಿ ಮುಜುಗರವನ್ನುಂಟು ಮಾಡಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಈತನ ಕೃತ್ಯ ವೈರಲ್ ಆಗಿದೆ.

ಸಾವಿರಾರು ಜನರು ಓಡಾಡುವ ಮೆಟ್ರೋ ಪ್ಲಾಟ್ ಫಾರಂ ನಲ್ಲಿಯೇ ಸಾರ್ವಜನಿಕವಾಗಿ ವ್ಯಕ್ತಿ ಮೂತ್ರವಿಸರ್ಜನೆ ಮಾಡಿದ್ದು, ಸ್ವಚ್ಛತೆ ಬಗ್ಗೆ ಆತನಿಗಿರುವ ಬೇಜವಾಬ್ದಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಟ್ರೋ ಪ್ಲಾಟ್ ಫಾರಂನಲ್ಲಿ ಗಾಜಿನ ಕಾರಿಡಾರ್ ಬಳಿ ನಿಂತು ವ್ಯಕ್ತಿ ಮೂತ್ರ ವಿಸರ್ಜಿಸುತ್ತಿರುವ ದೃಶ್ಯ ವೈರಲ್ ಆಗಿದೆ. ಅಲ್ಲಿಯೇ ಇದ್ದ ಮತ್ತೋರ್ವ ಪ್ರಯಾಣಿಕ ಇದನ್ನು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನ್ನ ಕೃತ್ಯವನ್ನು ಯಾರೋ ಸೆರೆ ಹಿಡಿಯುತ್ತಿದ್ದಾರೆ ಎಂಬುದನ್ನು ಗಮನಿಸುತ್ತಿದ್ದಂತೆ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮೆಟ್ರೋ ಪ್ಲಾಟ್ ಫಾರಂ ನಲ್ಲಿ ಮೂತ್ರ ವಿಸರ್ಜನೆ ಮಾಡಿ ಮುಜುಗರ ತಂದಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular