BIG NEWS: ರಾಜ್ಯದ 7 ಮಹಾನಗರ ಪಾಲಿಕೆಗೆ 1,400 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ

ಬೆಳಗಾವಿ: ರಾಜ್ಯದ 7 ಮಹಾನಗರ ಪಾಲಿಕೆಗಳಿಗೆ ತಲಾ ರೂ.200 ಕೋಟಿಯಂತೆ ರೂ.1,400 ಕೋಟಿ ವಿಶೇಷ ಅನುದಾವನ್ನು ನೀಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವ ಬೈರತಿ ಸುರೇಶ್, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳನ್ನಾಗಿ ಉನ್ನತೀಕರಿಸುವ ವೇಳೆ ಹತ್ತಿರ ಇರುವ ಗ್ರಾಮಾಂತರ ಪ್ರದೇಶಗಳನ್ನು ಸಹ ಸೇರ್ಪಡೆ ಮಾಡಿ ಸರಹದ್ದು ನಿಗದಿಪಡಿಸಲಾಗುತ್ತಿದೆ. ಆದರೆ ಕೆಲ ಶಾಸಕರು ನಗರಸಭೆ ವ್ಯಾಪ್ತಿಯಿಂದ ಗ್ರಾಮಗಳನ್ನು ಕೈಬಿಡುವಂತೆ ಮನವಿ ಮಾಡುತ್ತಾರೆ. ಇದು ಕಷ್ಟದ ಕೆಲಸವಾಗಿದೆ. ಸರ್ಕಾರ ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಿದ ಗ್ರಾಮಗಳ ಅಭಿವೃದ್ಧಿಗೆ ಹಣ ನೀಡಲಿದೆ, ಶಾಸಕರು ತಾಳ್ಮೆ ವಹಿಸಬೇಕು ಎಂದು ತಿಳಿಸಿದರು.

ಕರ್ನಾಟಕ ಪೌರಸಭೆಗಳ ಅಧಿನಿಯಮದ ಮಾನದಂಡಗಳ ಪ್ರಕಾರ 20,000 ದಿಂದ 50,000 ಜನಸಂಖ್ಯೆ, ಅಥವಾ ಚದರ ಮೀಟರ್‍ಗೆ 1,500 ಜನಸಾಂದ್ರತೆ, ರೂ.9 ಲಕ್ಷ ರಾಜಸ್ವ ಆದಾಯ, ಇಲ್ಲವೆ ಶೇ.50 ರಷ್ಟು ಕೃಷಿಯೇತರ ಚಟುವಟಿಕೆ ನಡೆಯುತ್ತಿದ್ದರೆ ಅಂತಹ ಸ್ಥಳವನ್ನು ಪುರಸಭೆಯನ್ನಾಗಿ ಉನ್ನತಿಕರಿಸಲಾಗುವುದು. ಆದರೆ ಹೊನ್ನಾವರ ಪಟ್ಟಣದಲ್ಲಿ 2011ರ ಜನಗಣತಿ ಅನ್ವಯ 19,109 ಜನಸಂಖ್ಯೆಯಿದೆ. ಈ ಹಿನ್ನಲೆಯಲ್ಲಿ ಹೊನ್ನಾವರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ತಿರಸ್ಕರಿಸಲಾಗಿದೆ ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read