ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳಿಂದ ಮುಷ್ಕರಕ್ಕೆ ನಿರ್ಧರಿಸಲಾಗಿದ್ದು, ಜುಲೈ 8ರಂದು 10 ಮಹಾನಗರ ಪಾಲಿಕೆಗಳು ಸ್ಥಗಿತಗೊಳ್ಳಲಿವೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬಿಬಿಎಂಪಿ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆ ನೌಕರರು ಪ್ರತಿಭಟನೆಗೆ ಸಜ್ಜಾಗಿದ್ದು, ಜುಲೈ 8ರಂದು ಸಾಮೂಹಿಕ ರಜೆ ಹಾಕಿ ಮುಷ್ಕರ ನಡೆಸಲಿದ್ದಾರೆ.
ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ನಡೆಯಲಿರುವ ಧರಣಿಯಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರು ಮಹಾನಗರ ಪಾಲಿಕೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ತುಮಕೂರು ಪಾಲಿಕೆ, ಮಂಗಳುರು ಮಹಾನಗರ ಪಾಲಿಕೆ, ಶಿವಮೊಗ್ಗ ಮಹಾನಗರ ಪಾಲಿಕೆ, ದಾವಣಗೆರೆ ಪಾಲಿಕೆ, ಮೈಸೂರು, ಬೆಳಗಾವಿ ಮಹಾನಗರ ಪಾಲಿಕೆಗಳು ಜುಲೈ 8ರಂದು ಸಂಪೂರ್ಣ ಬಂದ್ ಆಗಲಿದ್ದು, ಧರಣಿ ಸತ್ಯಾಗ್ರಹ ನಡೆಸಲು ನೌಕರರು ನಿರ್ಧರಿಸಿದ್ದಾರೆ.