HomeLatest Newsಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ; ರಾಜಭವನ ಚಲೋ ನಡೆಸಿದ...

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ; ರಾಜಭವನ ಚಲೋ ನಡೆಸಿದ ಕೈ ನಾಯಕರು

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ರಾಜಭವನ ಚಲೋ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮನರೇಗಾ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನರೇಗಾ ಹೆಸರು ಮರು ಸ್ಥಾಪನೆ ಮಾಡುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದ್ದಾರೆ.

ಬೃಹತ್ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ಸಚಿವರು, ಶಾಸಕರು, ಪದಾಧಿಕಾರಿಗಳು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ. ಫ್ರ‍ೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಬಳಿಕ ರಾಜಭವನ ಚಲೋ ನಡೆಸಿದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಬಸ್ ಗಳಲ್ಲಿ ಲೋಕಭವನಕ್ಕೆ ತೆರಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಕಾಂಗ್ರೆಸ್ ನಾಯಕರು, ಮನರೇಗಾ ಹೆಸರು ಬದಲಾವಣೆ ಮಾಡುವ ಮೂಲಕ ಕಾಯ್ದೆ ತಿದ್ದುಪಡಿ ಮಾಡಲಾಗಿರುವುದನ್ನು ಆಕ್ಷೇಪಿಸಿದ್ದು, ಕೇಂದ್ರ ಸರ್ಕಾರ ಈ ಮೂಲಕ ಗ್ರಾಮ ಪಂಚಾಯಿತಿಗಳ ಹಕ್ಕು ಕಸಿದುಕೊಳ್ಳುತ್ತಿದೆ. ಮನರೇಗಾ ಮರು ಸ್ಥಾಪಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular