HomeKarnatakaವಿಬಿಜಿ ರಾಮ್ ಜಿ 15 ದಿನದಲ್ಲಿ ಕೂಲಿ ಹಣ ಪಾವತಿಸದಿದ್ದರೆ ಕ್ರಮ: ಈಶ್ವರ ಖಂಡ್ರೆ

ವಿಬಿಜಿ ರಾಮ್ ಜಿ 15 ದಿನದಲ್ಲಿ ಕೂಲಿ ಹಣ ಪಾವತಿಸದಿದ್ದರೆ ಕ್ರಮ: ಈಶ್ವರ ಖಂಡ್ರೆ

ಬೆಂಗಳೂರು- ಗ್ರಾಮೀಣ ಉದ್ಯೋಗ ಖಾತ್ರಿ ವಿಬಿಜಿ ರಾಮ್ ಜಿ ಅಡಿ ಕೆಲಸ ಮಾಡಿದವರಿಗೆ 15 ದಿನವಾದರೂ ಕೂಲಿ ಹಣ ಪಾವತಿಯಾಗದಿದ್ದರೆ, ಸಂಬಂಧಿತ ಪಿಡಿಓಗಳನ್ನೇ ಹೊಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ಸಭೆಯಲ್ಲಿ ಕೂಲಿ ಪಾವತಿ ವಿಳಂಬಕ್ಕೆ ತರಾಟೆ

ವಿಕಾಸಸೌಧದಲ್ಲಿಂದು ಹಿರಿಯ ಅಧಿಕಾರಿಗಳು ಹಾಗೂ ಚಾಮರಾಜನಗರ ಜಿಲ್ಲಾಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಗ್ರಾಮೀಣ ಭಾಗದಲ್ಲಿ ಖಾಸಗಿ ಕೆಲಸ ಮಾಡುವ ಕೂಲಿಯಾಳುಗಳಿಗೆ ದೈನಂದಿನ ಆಧಾರದಲ್ಲಿ ಇಲ್ಲವೇ ವಾರಕ್ಕೆ ಒಮ್ಮೆ ಕೂಲಿ ಹಣ ಪಾವತಿ ಆಗುತ್ತದೆ. ಆದರೆ ವಿಬಿಜಿ ರಾಮ ಜಿ ಅಡಿ 15-20 ದಿನವಾದರೂ ಹಣ ಬಾರದಿದ್ದರೆ ಜನ ಕೆಲಸಕ್ಕೆ ಬರುವುದಿಲ್ಲ. ಕನಿಷ್ಠ 7 ಗರಿಷ್ಠ 10 ದಿನಗಳ ಒಳಗೆ ಕೂಲಿ ಹಣ ಪಾವತಿಯಾಗುವಂತೆ ಕ್ರಮ ವಹಿಸಿ ಎಂದು ತಿಳಿಸಿದರು.

ಕಷ್ಟಪಟ್ಟು ಕೂಲಿ ಮಾಡಿದವರಿಗೆ ನಿಗದಿತ ಕಾಲಮಿತಿಯಲ್ಲಿ ಕೂಲಿ ನೀಡದಿರುವುದು ಅಪರಾಧ ಎಂದು ಬಣ್ಣಿಸಿದ ಈಶ್ವರ ಖಂಡ್ರೆ, ಚಾಮರಾಜನಗರ ಜಿಲ್ಲೆಯಲ್ಲಿ ಪಿಡಿಓಗಳ ಲಾಗಿನ್ ನಲ್ಲಿಯೇ ಇನ್ನೂ 57 ಲಕ್ಷ ರೂ. ಕಾಮಗಾರಿಯ ಕೂಲಿ ಪೆಂಡಿಂಗ್ ಇದೆ. ಕೂಡಲೇ ಈ ಎಲ್ಲ ಕೂಲಿ ಹಣ ಪಾವತಿಗೆ ಕ್ರಮ ಕೈಗೊಳ್ಳಿ ಎಂದು ಸಿಇಓಗೆ ಸೂಚನೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೋಗಸ್ ಬಿಲ್ ಸೃಜನೆ: ಕಠಿಣ ಕ್ರಮದ ಎಚ್ಚರಿಕೆ

ಚಾಮರಾಜನಗರ ತಾಲೂಕು ಮಾದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್ ನಿಂದ ಉಳಿಮೆ ಮಾಡಿದ ಭೂಮಿಯಲ್ಲಿ ಜನರನ್ನು ಕೂರಿಸಿ ಫೋಟೋ ತೆಗೆಸಿ ಬೋಗಸ್ ಮಾನವ ದಿನ ಸೃಜನೆ ಮತ್ತು ನಕಲಿ ಬಿಲ್ ಮಾಡಿರುವ ಬಗ್ಗೆ ತಾವು ಕ್ರಮಕ್ಕೆ ಆದೇಶ ನೀಡಿದ್ದು, ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆದೇಶ ನೀಡಿದರು.

ಬೋಗಸ್ ಬಿಲ್ ಮತ್ತು ಕಳಪೆ ಕಾಮಗಾರಿಗೆ ಅವಕಾಶ ಇಲ್ಲ. ಇಂತಹ ದೂರುಗಳು ಬಂದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ ಈಶ್ವರ ಖಂಡ್ರೆ, ಗಡಿ ಜಿಲ್ಲೆ ಚಾಮರಾಜನಗರದಿಂದ ಯಾರೂ ಉದ್ಯೋಗ ಅರಸಿ ಗುಳೆ ಹೋಗದಂತೆ ಇರುವಲ್ಲಿಯೇ ಉದ್ಯೋಗ ನೀಡಬೇಕು, ಗುಣಮಟ್ಟದ ಶಾಶ್ವತ ಆಸ್ತಿ ನಿರ್ಮಾಣ ಮಾಡಬೇಕು ಎಂದರು.

ಸಾರ್ವಜನಿಕರಿಗೆ ಮನವಿ

ಸಾರ್ವಜನಿಕರಿಗೆ ಮನವಿ:

ಮನ್ರೇಗಾ ಈಗ ವಿಬಿಜಿ ರಾಮ್ ಜಿ ಆಗಿದ್ದು, ಈ ಯೋಜನೆಯಡಿ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅವಕಾಶವಿದೆ. ಗ್ರಾಮೀಣ ಜನರು ತಮ್ಮ ಗ್ರಾಮದಲ್ಲಿ ಅಭಿವೃದ್ಧಿಗೆ ಒತ್ತಾಯಿಸಬೇಕು. ಯಾವುದೇ ಕಾರಣಕ್ಕೂ ನಕಲಿ ಬಿಲ್ ಮಾಡಲು ಸಹಕಾರ ನೀಡಬಾರದು ಎಂದು ಮನವಿ ಮಾಡಿದರು,

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular