HomeLatest Newsಮನರೇಗಾ ಯೋಜನೆ ಸ್ವರೂಪವೇ ಬದಲು: ಶ್ರಮಜೀವಿಗಳ ಸಂವಿಧಾನ ಬದ್ಧ ಹಕ್ಕಿಗೆ ಕೊಡಲಿ ಏಟು ಹಾಕಿದ ಕೇಂದ್ರ...

ಮನರೇಗಾ ಯೋಜನೆ ಸ್ವರೂಪವೇ ಬದಲು: ಶ್ರಮಜೀವಿಗಳ ಸಂವಿಧಾನ ಬದ್ಧ ಹಕ್ಕಿಗೆ ಕೊಡಲಿ ಏಟು ಹಾಕಿದ ಕೇಂದ್ರ ಸರ್ಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

ಶಿವಮೊಗ್ಗ : ನರೇಗಾ ಯೋಜನೆಯ ಹೆಸರು ಬದಲಾವಣೆ ಮಾಡಿ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರ ಶ್ರಮಜೀವಿಗಳಿಗೆ ಆಶ್ರಯವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಕೊಡಲಿ ಪೆಟ್ಟು ಹಾಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನರೇಗಾ ಯೋಜನೆಯ ಸ್ವರೂಪ ಬದಲಿಸುವ ವೇಳೆ ಒಕ್ಕೂಟದ ವ್ಯವಸ್ಥೆಯಲ್ಲಿ ರಾಜ್ಯಗಳ ಜೊತೆ ಚರ್ಚೆ ನಡೆಸಬೇಕಿತ್ತು. ಆದರೆ ಕೇಂದ್ರ ಹಾಗೆ ಮಾಡಿಲ್ಲ ಎಂದರು.

ಸಂವಿಧಾನಬದ್ಧ ಹಕ್ಕನ್ನು ನರೇಗಾದಲ್ಲಿ ನೀಡಲಾಗಿತ್ತು. ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಮನರೇಗಾ ಯೋಜನೆ ತೆಗೆದು ಜಿಬಿ ಜಿ ರಾಮ್ ಜಿ ಯೋಜನೆ ತರಲಾಗಿದೆ. ಉದ್ಯೋಗ ಖಾತ್ರಿಯಲ್ಲಿ ಗ್ರಾಮ ಪಂಚಾಯತಿಯವರು ತೆಗೆದುಕೊಳ್ಳುವ ನಿರ್ಣಯಗಳನ್ನು ಇದೀಗ ದೆಹಲಿಯಲ್ಲಿ ನಿರ್ಣಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ‌

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಯೋಗ ಖಾತ್ರಿಯಲ್ಲಿ 6 ಕೋಟಿ ಕುಟುಂಬದ ಪರವಾಗಿ ರಾಷ್ಟ್ರ ವ್ಯಾಪಿ ಆಂದೋಲನ, ಪ್ರತಿಭಟನೆ ಮಾಡುತ್ತಿದ್ದೇವೆ. ಹಣ ದುರುಪಯೋಗ ಆಗುತ್ತಿದ್ದರೆ ತಪ್ಪಿಸುವುದಾಗಿ ಹೇಳಿದ್ದು ತುಂಬಾ ಸಂತೋಷ, ಆದರೆ ಹಣ ದುರುಪಯೋಗ ತಿಳಿದುಕೊಳ್ಳಲು 12 ವರ್ಷ ಬೇಕಾಯಿತೇ? ಬಿಜಿಪಿಗರಿಗೆ ನಾಚಿಕೆ ಆಗಬೇಕು ಎಂದು ಗುಡುಗಿದರು.

For Latest News Updates, Join Our Whatsapp Community🚩
RELATED ARTICLES

Most Popular