HomeKarnatakaBREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಗೈಡ್ ಲೈನ್ಸ್ ಜಾರಿ: ಕಮಿಷನರ್ ದಯಾನಂದ್

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಗೈಡ್ ಲೈನ್ಸ್ ಜಾರಿ: ಕಮಿಷನರ್ ದಯಾನಂದ್

ಬೆಂಗಳೂರು: ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಹಾವಳಿಗೆ ಬೇಸತ್ತು ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಗೈಡ್ ಲೈನ್ಸ್ ಜಾರಿಗೆ ತರಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಮಿಷನರ್ ದಯಾನಂದ್, ಈಗಾಗಲೇ ಸರ್ಕಾರದ ಮಟ್ಟದಲ್ಲಿ ಎರಡು ಸಭೆಗಳನ್ನು ನಡೆಸಲಾಗಿದೆ. ಸಭೆಯಲ್ಲಿ ಕೆಲವೊಂದು ಗೈಡ್ ಲೈನ್ಸ್ ಜಾರಿಗೆ ತರುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಸೂಚನೆಯಂತೆ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗುವುದು ಎಂದರು.

ಮೀಟರ್ ಬಡ್ಡಿ ದಂಧೆಕೋರರ ಮೇಲೆ ಹದ್ದಿನ ಕಣ್ಣಿಡಲು ಸೂಚಿಸಲಾಗಿದೆ. ಫೈನಾನ್ಸ್ ನವರಿಂದ ಯಾವುದೇ ತೊಂದರೆಯಾದಲ್ಲಿ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular