ಮೈಕ್ರೋ ಫೈನಾನ್ಸ್, ಮೀಟರ್ ಬಡ್ಡಿ ದಂಧೆ ಕಿರುಕುಳ: ತೊಂದರೆಗೊಳಗಾದವರು ಈ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ

ಕಾರವಾರ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ, ಮೀಟರ್ ಬಡ್ಡಿ ದಂಧೆ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಜನರು ಊರು ಬಿಟ್ಟು ಹೋಗುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಮೈಕ್ರೋ ಫೈನಾನ್ಸ್, ಮೀಟರ್ ಬಡ್ಡಿ ದಂಧೆ ಕೋರರ ಕಿರುಕುಳ ಸಂಬಂಧ 6 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂದು ಉತ್ತರ ಕನ್ನಡ ಎಸ್ ಪಿ ನಾರಾಯಣ ತಿಳಿಸಿದ್ದಾರೆ.

ಹಲವರು ಬಡ್ಡಿ ದಂಧೆಯಲ್ಲಿ ಸಿಕುಕಿದ್ದಾರೆ. ಆದರೆ ದೂರು ಕೊಡುತ್ತಿಲ್ಲ. ಅನೇಕರು ಚೆಕ್ ಬೌನ್ಸ್ ಹಾಗೂ ಪುಡಿ ರೌಡಿಗಳಿಗೆ ಹೆದರುತ್ತಾರೆ. ಕೆಲವರು ನಮಗೆ ಗೌಪ್ಯವಾಗಿ ಮಾಹಿತಿ ಕೊಡುತ್ತಾರೆ. ಹೀಗೆ ಬಂದ ಮಾಹಿತಿ ಮೇರೆಗೆ ಓರ್ವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಮುಂಡಗೋಡ ಪಟ್ಟಣದ ನವಲೆ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 250ಕ್ಕೂ ಹೆಚ್ಚು ಖಾಲಿ ಚೆಕ್ ಗಳು ಪತ್ತೆಯಾಗಿವೆ.

ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆಯಿಂದ ಜನ ಕಷ್ಟ ಅನುಭವಿಸುತ್ತಿದ್ದಾರೆ. ತಿಂಗಳಿಗೆ 30% ಬಡ್ಡಿ ಕಟ್ಟುವ ದಂಧೆ ಜಿಲ್ಲೆಯಲ್ಲಿ ನಡೆಯುತ್ತಿದೆ. ಇದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಮೀಟರ್ ಬಡ್ಡಿ ಹಾಗೂ ಮೈಕ್ರೋ ಫೈನಾನ್ಸ್ ನಿಂದ ಕಿರುಕುಳವಾದರೆ ಉತ್ತರ ಕನ್ನಡ ಎಸ್ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ ಎಂದು ತಿಳಿಸಿದ್ದಾರೆ.

ಮೊಬೈಲ್ ಸಂಖ್ಯೆ 9480805201 ಗೆ ಕರೆ ಮಾಡಿ ದೂರು ನೀಡಬಹುದು ಅಥವಾ ಎಸ್ ಪಿ ಕಚೇರಿಗೂ ಆಗಮಿಸಿ ಗೌಪ್ಯವಾಗಿ ಮಾಹಿತಿ ನೀಡಬಹುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read