HomeKarnatakaBIG NEWS: ಮೈಕ್ರೋ ಫೈನಾನ್ಸ್ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

BIG NEWS: ಮೈಕ್ರೋ ಫೈನಾನ್ಸ್ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ನೊಂದ ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಸಾಲ ತೀರಿಸಲು ಸಾಧ್ಯವೇ ಎಂಬುದನ್ನೂ ಗಮನಿಸದೇ ಒಬ್ಬನೇ ವ್ಯಕ್ತಿಗೆ ನಿಯಮ ಬಾಹಿರವಾಗಿ ಸಾಲ ನೀಡುವುದು ಸರಿಯಲ್ಲ. ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ? ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ? RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ? ಎಂದು ಸಾಲು ಸಾಲು ಪ್ರಶ್ನೆ ಮುಂದಿಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ. ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು. ಇಂತಹ ತಪ್ಪುಗಳನ್ನು ಮಾಡಿ ಸಾಲ ಕೊಡುತ್ತಿರುವುದರ ಉದ್ದೇಶವೇನು? ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular