HomeKarnatakaBIG NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ಮಹಿಳೆ ಬಲಿ: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು!

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ಮಹಿಳೆ ಬಲಿ: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು!

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವರು ಬಲಿಯಾಗಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳ ಕಾಟಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇಸಾವನ್ನಪ್ಪಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರದಲ್ಲಿ ಈ ಘಟನೆ ನಡೆದಿದೆ. ಪ್ರೇಮಾ (50) ಮೃತ ಮಹಿಳೆ. ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಾಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೇ ಪ್ರೇಮಾ ಸಾವನ್ನಪ್ಪಿದ್ದಾರೆ.

ವಾರದ ಹಿಂದಷ್ಟೇ ಪ್ರೇಮಾ ಮನೆಯನ್ನು ಸಿಬ್ಬಂದಿಗಳು ಸೀಜ್ ಮಾಡಿದ್ದರು. ಪ್ರೇಮಾ ಚನ್ನಪಟ್ಟಣದ ಉಜ್ಜೀವನ್ ಬ್ಯಾಂಕ್ ನಲ್ಲಿ6 ಲಕ್ಷ ಸಾಲ ಮಾಡಿದ್ದರು. ಮೂರು ತಿಂಗಳ ಕಂತು ಕಟ್ಟದ ಕಾರಣಕ್ಕೆ ಮನೆ ಸೀಜ್ ಮಾಡಿದ್ದರು, ಇದರಿಂದ ನೊಂದ ಪ್ರೇಮಾ ಬೇರೆ ದಾರಿ ಕಾಣದೇ ವಿಷದ ಮಾತ್ರೆ ಸೇವಿಸಿದ್ದರು. ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular