HomeLatest Newsಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಶ್ಯೂರಿಟಿ...

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಶ್ಯೂರಿಟಿ ಇಲ್ಲದೇ ಕಿರುಸಾಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು ಜಾರಿಯಾದ ನಂತರದಿಂದ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ, ಜೊತೆಗೆ ಆತ್ಮಹತ್ಯೆಗಳು ಕೂಡ ಕಡಿಮೆಯಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲಗಳ ಬಲವಂತದ ಕ್ರಮಗಳ ಪ್ರತಿಬಂಧಕ ಕಾಯ್ದೆ ಆಧ್ಯಾದೇಶ -2025 ಮಾಡಿದ್ದು ನಾವೇ. ಇದರಲ್ಲಿ ಸಣ್ಣಪುಟ್ಟ ದೋಷಗಳಿರಬಹುದು. ಕಾಯ್ದೆಯೇ ಸರಿ ಇಲ್ಲ ಎನ್ನುವುದು ಸರಿಯಲ್ಲ. ಕಾಯ್ದೆ ಮಾಡುವ ಮೊದಲು ಮೈಕ್ರೋ ಫೈನಾನ್ಸ್ ಕಿರಕುಳದಿಂದ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿತ್ತು, ಕ್ರಮೇಣ ಅದು ಕಡಿಮೆಯಾಗಿ ಶೂನ್ಯಕ್ಕೆ ತಲುಪಿದೆ ಎಂದು ಹೇಳಿದ್ದಾರೆ.

ಆತ್ಮಹತ್ಯೆ ನಿಲ್ಲಿಸಬೇಕೆನ್ನುವುದು ನಮ್ಮ ಉದ್ದೇಶವಾಗಿದೆ. ಇದರಲ್ಲಿ ಆತ್ಮಹತ್ಯೆ ಮಾಡಿಕೊಂಡವರಿಗೆ ಪರಿಹಾರ ನೀಡುವ ವ್ಯವಸ್ಥೆ ಇಲ್ಲ. ಸಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಅದೇ ರೀತಿ ಫೈನಾನ್ಸ್ ಕಿರಕುಕುಳದಿಂದ ಆತ್ಮಹತ್ಯೆ ಮಾಡಿಕೊಂಡವರಿಗೆ 5 ಲಕ್ಷ ಪರಿಹಾರ ನೀಡುವ ಬಗ್ಗೆ ಹಣಕಾಸು ಇಲಾಖೆ, ಮುಖ್ಯ ಕಾರ್ಯದರ್ಶಿಗಳ ಜತೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು.  ಆತ್ಮಹತ್ಯೆ ತಡೆಯಲು ಕಿರುಸಾಲ, ಸಣ್ಣ ಸಾಲವನ್ನು ಶ್ಯೂರಿಟಿ ಇಲ್ಲದೇ ಬ್ಯಾಂಕ್ ಗಳಿಂದ ಕೊಡಿಸಬೇಕೆನ್ನುವ ಸಲಹೆಯನ್ನೂ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular