HomeKarnatakaಮೈಕ್ರೋಸಾಫ್ಟ್ ಸಾಫ್ಟ್ ವೇರ್ ನಲ್ಲಿ ಸಮಸ್ಯೆ: ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯ; KIAನಲ್ಲಿ ಸಿಬ್ಬಂದಿ, ಪ್ರಯಾಣಿಕರ...

ಮೈಕ್ರೋಸಾಫ್ಟ್ ಸಾಫ್ಟ್ ವೇರ್ ನಲ್ಲಿ ಸಮಸ್ಯೆ: ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯ; KIAನಲ್ಲಿ ಸಿಬ್ಬಂದಿ, ಪ್ರಯಾಣಿಕರ ಪರದಾಟ

ಬೆಂಗಳೂರು: ಮಾಹಿತಿ ತಂತ್ರಜ್ಞಾನದ ದಿಗ್ಗಜ ಮೈಕ್ರೋಸಾಫ್ಟ್ ಸಾಫ್ಟ್ ವೇರ್ ನಲ್ಲಿ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಆನ್ ಲೈನ್ ಸೇವೆಯಲ್ಲಿ ಭಾರಿ ವ್ಯತ್ಯವಾಗಿದ್ದು, ಪ್ರಮುಖವಾಗಿ ವಿಮಾನ ನಿಲ್ದಾಣಗಳಲ್ಲಿ ತೊಂದರೆ ಎದುರಾಗಿದೆ.

ಮೈಕ್ರೋಸಾಫ್ಟ್ ನ ಕ್ಲೌಡ್ ಸರ್ವೀಸ್ ನಲ್ಲಿ ತಾಂತ್ರಿಕ ಸಮಸ್ಯೆಯುಂಟಾಗಿದೆ. ಇದರಿಂದ ಜಗತ್ತಿನಾದ್ಯಂತ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಷೇರುಮಾರುಕಟ್ಟೆ, ಬ್ಯಾಂಕಿಂಗ್ ಕ್ಷೇತ್ರ, ವಿಮಾನ, ರೈಲು ಸೇವೆಗಳಲ್ಲಿ ವ್ಯತ್ಯಯವುಂಟಾಗಿದೆ. ಭಾರತದ ಬಹುತೇಕ ವಿಮಾನ ನಿಲ್ದಾಣಗಳಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯವುಂಟಾಗಿದೆ. ಟಿಕೆಟ್ ಬುಕ್ಕಿಂಗ್, ಚೆಕ್ ಇನ್, ಚೆಕ್ ಔಟ್, ಬೋರ್ಡಿಂಗ್ ಪಾಸ್ ಸೇರಿದಂತೆ ಹಲವು ಕೆಲಸಗಳು ಸ್ಥಗಿತಗೊಂಡಿದ್ದರಿಂದ ಸಿಬ್ಬಂದಿಗಳು ಮ್ಯಾನುವಲ್ ಮೂಲಕ ಕಾರ್ಯನಿರ್ವಹಿಸುತ್ತಿದ್ದು, ವಿಮಾನ ಹಾರಾಟ ವಿಳಂಬವಾಗುತ್ತಿದೆ.

ಸಾಫ್ಟ್ ವೇರ್ ಸಮಸ್ಯೆಯಿಂದಾಗಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನ ಹಾರಾಟದಲ್ಲಿ ವಿಳಂಬವಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಇನ್ನು ಏರ್ ಪೋರ್ಟ್ ಸಿಬ್ಬಂದಿಗಳು ಆನ್ ಲೈನ್ ಬದಲಾಗಿ ಕೈಯಿಂದ ಬರೆದು ಕಾರ್ಯನಿರ್ವಹಿಸುತ್ತಿರುವುದರಿಂದಾಗಿ ವಿಳಂಬವಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳೂರು, ಹುಬ್ಬಳ್ಳಿ, ಗೋವಾ, ಹೈದರಾಬಾದ್, ಕೇರಳ, ದೆಹಲಿ, ಕೋಲ್ಕತ್ತಾ ಸೇರಿದಂತೆ ಬಹುತೇಕ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ವಿಮಾನ ಹಾರಾಟದಲ್ಲಿ ವ್ಯತ್ಯವಾಗುತ್ತಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular