HomeKarnatakaBREAKING NEWS: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 15 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

BREAKING NEWS: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 15 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಕೊಪ್ಪಳ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ.

ಸಂಗಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಚಿತ್ರಾನ್ನ ಸೇವಿಸಿದ್ದರು. ಊಟದ ಬಳಿಕ ಮಕ್ಕಳಲ್ಲಿ ವಾಂತಿಭೇದಿ ಶುರುವಾಗಿದೆ. 15 ಮಕ್ಕಳು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಸ್ವಸ್ಥ ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಿ.ಹೆಚ್.ಒ ಡಾ.ಲಿಂಗರಾಜ್ ಆರೋಗ್ಯಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular