BIG NEWS: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಹತ್ಯೆ ಪ್ರಕರಣ ಬಳಿಕ ಎಚ್ಚೆತ್ತ ಸರ್ಕಾರ: ವಲಸೆ ಕಾರ್ಮಿಕರ ಮೇಲೆ ವಿಶೇಷ ನಿಗಾ ಇಡಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ನಿರ್ಧಾರ

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ 5 ವರ್ಷದ ಬಾಲಕಿ ಕಿಡ್ನ್ಯಾಪ್ ಹಾಗೂ ಹತ್ಯೆ ಪ್ರಕರಣದ ಬಳಿಕ ರಾಜ್ಯ ಸರ್ಕಾರ ಎಚ್ಚುತ್ತುಕೊಂಡಿದ್ದು, ವಲಸೆ ಕಾರ್ಮಿಕರ ಮೇಲೆ ವಿಶೇಶ ನಿಗಾ ಇಡಲು ಮುಂದಾಗಿದೆ.

ವಿಕಾಸಸೌಧದಲ್ಲಿ ಕಾರ್ಮಿಕರು ಹಾಗೂ ಕಾರ್ಮಿಕ ಸಂಘಟನೆಗಳು, ಕೈಗಾರಿಕೆಗಳ ಉನ್ನತ ಅಧಿಕಾರಿಗಳು, ಮಾನವ ಸಂಪನ್ಮೂಲ ಹಾಗೂ ಉದ್ಯೋಗದಾತರೊಡನೆ ನಡೆದ ಉನ್ನತಮಟ್ಟದ ಸಭೆಯಲ್ಲಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಬೇರೆ ರಾಜ್ಯಗಳಿಂದ ಉದ್ಯೋಗವರಸಿ ನಮ್ಮ ರಾಜ್ಯಕ್ಕೆ ಬರುವ ವಲಸೆ ಕರಮಿಕರ ಮಾಹಿತಿಯನ್ನು ಉದ್ಯೋಗದಾತರು ಸಂಗ್ರಹಿಸಬೇಕು ಎಂದು ಸೂಚಿಸಿದರು.

ಬೇರೆ ರಾಜ್ಯದ ಕಾರ್ಮಿಕರ ಮಾಹಿತಿ ಸಂಗ್ರಹಿಸುವುದು ತುಂಬಾ ಕಷ್ಟವಿದೆ. ಅದು ನಮಗೆ ಸವಾಲು. ಆದರೂ ಈ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ನಡೆದ ಘಟನೆ ತುಂಬಾ ನೋವಿನ ಘಟನೆ. ಇಂತಹ ಘಟನೆ ದೇಶದ ಯಾವುದೇ ಮೂಲೆಯಲ್ಲಿ ಯಾವಾಗ ಬೇಕಾದರೂ ನಡೆಯಬಹುದು. ಅಂತಹ ಸಂದರ್ಭದಲ್ಲಿ ಕೃತ್ಯ ಎಸಗಿದವರ ಮಾಹಿತಿ ಸಂಗ್ರಹವಿದ್ದರೆ ಸುಲಭವಾಗಲಿದೆ. ಈ ಬಗ್ಗೆ ಗುತ್ತಿಗೆದಾರರು ಮಾಹಿತಿ ನೀಡಬೇಕು. ಜನರಲ್ಲಿ ಅರಿವು ಮೂಡಿಸಬೇಕು. ಕಾರ್ಮಿಕರ ಮೇಲೆ ವಿಶೇಷ ನಿಗಾ ಇಡಬೇಕು ಎಂದರು

ಸಂಘಟಿತ ವಲಯದಲ್ಲಿ ದುಡಿಯುವ ಕಾರ್ಮಿಕರ ಎಲ್ಲಾ ಮಾಹಿತಿ ಸಿಗಲಿದೆ. ಆದರೆ ಅಸಂಘಟಿ ತವಲಯದ ಕಾರ್ಮಿಕರ ವಿವರ ಸಿಗುವುದಿಲ್ಲ. ವಿಶೇಷವಾಗಿ ಕಟ್ಟಡ ನಿರ್ಮಾಣ ಕಾರ್ಮಿಕರ ಬಗ್ಗೆ. ಗುತ್ತಿಗೆದಾರರು ನೋಂದಣಿ ಮಾಡಬೇಕು ಎಂಬ ನಿಯಮ ಇದೆ. ಆದರೆ ಮಾಡುವುದಿಲ್ಲ. ಯಾರು ಎಲ್ಲಿ ಏನು ಕೆಲಸ ಮಾಡ್ತಾ ಇದ್ದಾರೆ ಎಂಬುದು ತಿಳಿಯುವುದಿಲ್ಲ. ಕೇವಲ ಕಾರ್ಮಿಕ ಇಲಾಖೆ ಮಾತ್ರವಲ್ಲ ಎಲ್ಲಾ ಇಲಾಖೆಯ ಕಾರ್ಮಿಕರ ವಿವರ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಯಾವುದೇ ಗುತ್ತಿಗೆ ಕಾರ್ಮಿಕ ಬೇರೆ ರಾಜ್ಯದಿಂದ ಬಂದರೆ ಅವರ ಮಾಹಿತಿ ಸಂಗ್ರಹಿಸಿ ಎಂದು ಸೂಚಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read