ವಿಜಯಪುರ ಜಿಲ್ಲೆಯಲ್ಲಿ ಲಘು ಭೂಕಂಪ, ಮನೆಯಿಂದ ಹೊರಗೆ ಓಡಿ ಬಂದ ಜನ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 2.9 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ವೇಳೆ ಭಯಗೊಂಡ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಯರನಾಳ ಗ್ರಾಮ ಪಂಚಾಯಿತಿಯ ಹತ್ತರ್ಕಿಹಾಳ ಗ್ರಾಮದ ಬಳಿ ಭೂಕಂಪ ಸಂಭವಿಸಿದೆ. ಗ್ರಾಮದ ವಾಯುವ್ಯಕ್ಕೆ 2.5 ಕಿ.ಮೀ. ದೂರದಲ್ಲಿ 5 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಭೂಕಂಪನದ ತೀವ್ರತೆ ಕಡಿಮೆಯಾಗಿದ್ದು, ಕಂಪನದ ಕೇಂದ್ರದಿಂದ 50 ರಿಂದ 60 ಕಿ.ಮೀ. ದೂರದವರೆಗೆ ಕಂಪನದ ಅನುಭವ ಆಗಿರಬಹುದು. ತೀವ್ರತೆ ಕಡಿಮೆ ಇರುವ ಈ ಕಂಪನಗಳಿಂದ ಯಾವುದೇ ಹಾನಿಯಾಗುವುದಿಲ್ಲ. ಆದರೆ ಕಂಪಿಸಿದ ಅನುಭವವಾಗಬಹುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read