ಚಾಮರಾಜನಗರ: ಹಾಲಿನ ದರವನ್ನು 4 ರೂಪಾಯಿ ಏರಿಕೆ ಮಾಡಲಾಗಿದ್ದು, ಆ ಹಣವನ್ನು ಸಂಪೂರ್ಣವಾಗಿ ರೈತರಿಗೆ ನೀಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರದಿಂದ ಜಾರಿಗೆ ಬರುವಂತೆ ಹಾಲಿನ ದರವನ್ನು 4 ರೂಪಾಯಿ ಏರಿಕೆ ಮಾಡಲಾಗಿದ್ದು, ಈ ಹಣವನ್ನು ಹಾಲು ಉತ್ಪಾದಕರಿಗೆ ನೀಡುವಂತೆ ಎಲ್ಲಾ ಹಾಲು ಒಕ್ಕೂಟಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಹಾಲು, ಮೊಸರು, ವಿದ್ಯುತ್ ಬೆಲೆ ಏರಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ 60 ರೂಪಾಯಿಗೆ ಇದ್ದ ಪೆಟ್ರೋಲ್ ದರ ಈಗ 103 ರೂಪಾಯಿ ಆಗಿದೆ. ಅದರ ಬಗ್ಗೆ ಯಾಕೆ ಯಾರೂ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.