HomeKarnatakaಜನಸಾಮಾನ್ಯರಿಗೆ ಮತ್ತೊಂದು ಶಾಕ್: ಇಂದಿನಿಂದ ಹೋಟೆಲ್ ಗಳಲ್ಲಿ ಕಾಫಿ, ಟೀ, ತಿನಿಸು ಬೆಲೆ ಹೆಚ್ಚಳ ಸಾಧ್ಯತೆ

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಇಂದಿನಿಂದ ಹೋಟೆಲ್ ಗಳಲ್ಲಿ ಕಾಫಿ, ಟೀ, ತಿನಿಸು ಬೆಲೆ ಹೆಚ್ಚಳ ಸಾಧ್ಯತೆ

ಬೆಂಗಳೂರು: ಏಪ್ರಿಲ್ 1ರ ಇಂದಿನಿಂದ ಹಾಲು, ಮೊಸರಿನ ದರ ಹೆಚ್ಚಳವಾಗಿದ್ದು, ಇದರಿಂದ ಹೋಟೆಲ್ ಗಳಲ್ಲಿ ಕಾಫಿ, ಚಹಾ ಸೇರಿ ಹಾಲಿನ ಖಾದ್ಯ ಸಿಹಿ ತಿನಿಸುಗಳ ಬೆಲೆಯಲ್ಲಿ ಏರಿಕೆಯಾಗಲಿದೆ.

ಪ್ರಸ್ತುತ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಒಂದು ಟೀ, ಕಾಫಿ ದರ 15 ರಿಂದ 20 ರೂ ವರೆಗೆ ಇದ್ದು, ಇದನ್ನು ಏರಿಕೆ ಮಾಡುವ ಸಾಧ್ಯತೆ ಇದೆ. ಬೆಂಗಳೂರು ಹೋಟೆಲ್ ಮಾಲೀಕರ ಸಂಘ, ಕರ್ನಾಟಕ ಹೋಟೆಲ್ ಮಾಲೀಕರ ಸಂಘಗಳು ಬೆಲೆ ಏರಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.

ನಂದಿನಿ ಹಾಲಿನ ದರ ಲೀಟರ್ ಗೆ 4 ರೂಪಾಯಿ ಹೆಚ್ಚಳವಾಗಿದ್ದು, ಅದಕ್ಕೆ ಅನುಗುಣವಾಗಿ ಟೀ, ಕಾಫಿ ದರದಲ್ಲಿ ಶೇಕಡ 10 ರಿಂದ 15 ರಷ್ಟು ಹೆಚ್ಚಳವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ, ತರಕಾರಿ, ಎಣ್ಣೆ, ದಿನಸಿ ದರ ಕಳೆದು ಒಂದು ವರ್ಷದ ಅವಧಿಯಲ್ಲಿ ಶೇಕಡ 30ರಷ್ಟು ಏರಿಕೆಯಾಗಿದೆ. ವೇತನ ಹೆಚ್ಚಳ, ವಸ್ತುಗಳ ಬೆಲೆ ಏರಿಕೆ, ಕಾರ್ಮಿಕರ ಕೊರತೆ ನಷ್ಟ ಸರಿದೂಗಿಸಲು ದರ ಏರಿಕೆ ಅನಿವಾರ್ಯವಾಗಿದೆ. ಹೋಟೆಲ್ ಗಳಲ್ಲಿ ಬೆಣ್ಣೆ, ತುಪ್ಪ, ಪನ್ನೀರ್, ಹಾಲು ಬಳಸುವ ಎಲ್ಲ ತಿನಿಸುಗಳ ಬೆಲೆ ಗ್ರಾಹಕರ ಮೇಲೆ ವರ್ಗಾವಣೆಯಾಗಲಿದೆ. ಜ್ಯೂಸ್, ಐಸ್ ಕ್ರೀಮ್ ಮಳಿಗೆಗಳಲ್ಲೂ ದರ ಹೆಚ್ಚಳವಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular