BREAKING : ಶೀಘ್ರವೇ ಹಾಲಿನ ದರ 5 ರೂ ಹೆಚ್ಚಳ : ಸಚಿವ ಕೆ. ವೆಂಕಟೇಶ್ ಸುಳಿವು

ಬೆಂಗಳೂರು : ಶೀಘ್ರವೇ ಹಾಲಿನ ದರ 5 ರೂ ಹೆಚ್ಚಳವಾಗಲಿದೆ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ.

ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು ಹಾಲಿನ ದರ ಏರಿಕೆಗೆ ಒಕ್ಕೂಟಗಳಿಂದ ಬಹಳ ಒತ್ತಡ ಬರುತ್ತಿದೆ. ನಮ್ಮ ಉದ್ದೇಶ ರೈತರಿಗೆ ಅನುಕೂಲವಾಗಬೇಕು, ಆದ್ದರಿಂದ ಹಾಲಿನ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದರು. ಹಾಲಿನ ದರ ಏರಿಸುವಂತೆ ರೈತರು ಮತ್ತು ಒಕ್ಕೂಟದಿಂದ ಸಾಕಷ್ಟು ಒತ್ತಾಯ ಬರುತ್ತಿದೆ. ಹಾಲಿನ ದರ 5 ರೂ.ಗೆ ಹೆಚ್ಚಿಸುವಂತೆ ರೈತರು ಬೇಡಿಕೆ ಮುಂದಿಟ್ಟಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ಹಾಲಿನ ದರ ಏರಿಕೆಯ ಮಾಡುವ ಬಗ್ಗೆ ಸಿಎಂ ಜೊತೆ ಚರ್ಚಿಸಿದ ನಂತರ ಅದನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದರು.

ತರಕಾರಿ, ಆಹಾರ ಬೆಲೆ ಏರಿಕೆಯ ನಡುವೆ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಹಾಲಿನ ದರ 5 ರೂ ಹೆಚ್ಚಳವಾಗುವ ಸಾಧ್ಯತೆಯಿದೆ. ನೂತನ ದರ ಮುಂದಿನ ವಾರದಿಂದಲೇ ಜಾರಿಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.ಮುಂದಿನ ವಾರದಿಂದ ಹೊಸ ದರ ಜಾರಿಗೆ ಬರಲಿದೆ ಎಂದು ಹೇಳಲಾಗಿದ್ದು, ಈಗಾಗಲೇ ಹಾಲಿನ ದರ ಏರಿಕೆ ವಿಚಾರವಾಗಿ ಕೆಎಂ ಎಫ್ ಅಧಿಕಾರಿಗಳು ಮುಖ್ಯಮಂತ್ರಿಗಳೊಂದಿಗೆ ಒಂದು ಸುತ್ತಿನ ಸಭೆ ನಡೆಸಿದ್ದಾರೆ. ಶುಕ್ರವಾರ ಮತ್ತೆ ಕೆಎಂ ಎಫ್ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read