Milk Price Hike : ನಂದಿನಿ ಹಾಲಿನ ದರ 3 ರೂ. ಏರಿಕೆಗೆ ಸಂಪುಟ ಸಭೆ ಅಸ್ತು : ಆಗಸ್ಟ್ 1 ರಿಂದ ಜಾರಿ

ಬೆಂಗಳೂರು: ನಂದಿನಿ ಹಾಲಿನ ದರ 3 ರೂ. ಏರಿಕೆಗೆ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆ ಅಸ್ತು ಎಂದಿದ್ದು, ಆಗಸ್ಟ್ 1 ರಿಂದಲೇ ನೂತನ ದರ ಜಾರಿಗೆ ಬರಲಿದೆ. ಈ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿತ್ತು, ಇದಕ್ಕೆ ನಿನ್ನೆ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ. ಆಗಸ್ಟ್ 1 ರಿಂದ ನಂದಿನಿ ಹಾಲಿನ ದರ ಹೆಚ್ಚಳ ಜಾರಿಗೆ ಬರಲಿದೆ.

ಯಾವುದಕ್ಕೆ ಎಷ್ಟು ದರ ಎಂಬ ಮಾಹಿತಿಯನ್ನು ನೋಡುವುದಾದರೆ, ಹೋಮೋಜಿನೈಸ್ಟ್ ಟೋನ್ಡ್ ಹಾಲು 40 ರೂ ದಿಂದ 43 ರೂ. ಶುಭಂ ಹಾಲು 45 ರೂ ದಿಂದ 48 ರೂ. ಮೊಸರು- 47- 50 ರೂ. ಟೋನ್ಡ್ ಹಾಲು- 39 ರೂದಿಂದ 42 ರೂ. ಶುಭಂ ಹಾಲು (ಹಸಿರು)- 45 ರೂದಿಂದ 48 ರೂ. ಸ್ಪೆಷಲ್ ಹಾಲು (ಆರೆಂಜ್) 45 ರೂ ದಿಂದ 48 ರೂ. ಸಮೃದ್ದಿ ಹಾಲು 50 ರೂ ದಿಂದ 53 ರೂ. ಸಂತೃಪ್ತಿ ಹಾಲು 52 ರೂ ದಿಂದ 55 ರೂ. ಆಗಿದೆ.

ಕೆಎಂಎಫ್ ನಂದಿನಿ ಹಾಲಿನ ದರ ಪರಿಷ್ಕರಣೆ ಸಂಬಂಧ ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು, ಸಭೆಯಲ್ಲಿ ಹಾಲಿನ ದರ ಹೆಚ್ಚಳದ ಕುರಿತು ತೀರ್ಮಾನ ಕೈಗೊಳ್ಳಲಾಗಿತ್ತು. ಪ್ರತಿ ಲೀಟರ್ ಹಾಲಿನ ದರ 5 ರೂಪಾಯಿ ಹೆಚ್ಚಳ ಮಾಡುವಂತೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು, ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಿ 5 ರೂಪಾಯಿ ಬದಲಿಗೆ 3 ರೂ. ಹೆಚ್ಚಳಕ್ಕೆ ಸರ್ಕಾರ ಸಮ್ಮತಿ ನೀಡಿದೆ. ಹಾಲು ಒಕ್ಕೂಟದ ನಷ್ಟ ಸರಿದೂಗಿಸಲು ದರ ಹೆಚ್ಚಳಕ್ಕೆ ಸಮ್ಮತಿ ನೀಡಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read