ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರ ಮತ್ತೊಮ್ಮೆ ಏರಿಕೆಯಾಗುವ ಸಾಧ್ಯತೆ ಎದುರಾಗಿದೆ. ಹಾಲು ಉತ್ಪಾದಕರ ಸಂಘಟನೆಗಳು ಪ್ರತಿ ಲೀಟರ್ ಹಾಲಿನ ದರವನ್ನು ₹8ರಷ್ಟು ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.. ಹಾಲು ಉತ್ಪಾದನಾ ವೆಚ್ಚ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಅಗತ್ಯ ಎಂದು ಉತ್ಪಾದಕರು ಒತ್ತಾಯಿಸುತ್ತಿದ್ದಾರೆ.
ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಸರ್ಕಾರದ ಮುಂದೆ ಬೇಡಿಕೆ ಮಂಡಿಸಲು ವಿವಿಧ ಹಾಲು ಒಕ್ಕೂಟಗಳೊಂದಿಗೆ ಹಾಲು ಉತ್ಪಾದಕರು ಸಿದ್ಧತೆ ನಡೆಸುತ್ತಿದ್ದಾರೆ. ಉತ್ಪಾದನಾ ವೆಚ್ಚ, ಪಶು ಆಹಾರದ ಬೆಲೆ, ಜಾನುವಾರುಗಳ ನಿರ್ವಹಣೆ ಸೇರಿದಂತೆ ಹಲವು ಖರ್ಚುಗಳು ಹೆಚ್ಚಾಗಿರುವುದರಿಂದ ಪ್ರಸ್ತುತ ದರದಲ್ಲಿ ಹಾಲು ಉತ್ಪಾದನೆ ಕಷ್ಟವಾಗುತ್ತಿದೆ ಎಂದು ಅವರು ಹೇಳುತ್ತಿದ್ದಾರೆ.
ಹಾಲು ಉತ್ಪಾದನೆಯ ವೆಚ್ಚ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ದರದಲ್ಲಿ ಹಾಲು ಉತ್ಪಾದಕರಿಗೆ ಸೂಕ್ತ ಆದಾಯ ದೊರೆಯುತ್ತಿಲ್ಲ ಎಂಬುದು ಉತ್ಪಾದಕರ ವಾದವಾಗಿದೆ. ಜಾನುವಾರುಗಳ ನಿರ್ವಹಣೆ, ಪಶು ಆಹಾರ ಸೇರಿದಂತೆ ವಿವಿಧ ವೆಚ್ಚಗಳು ಹೆಚ್ಚಾಗಿರುವುದರಿಂದ ಹಾಲಿನ ಖರೀದಿ ದರವನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ.
ಗ್ರಾಹಕರ ಮೇಲೆ ಪರಿಣಾಮ?
ಹಾಲಿನ ಖರೀದಿ ದರ ಹೆಚ್ಚಳಕ್ಕೆ ಸರ್ಕಾರ ಅನುಮತಿ ನೀಡಿದರೆ, ಅದರ ಪರಿಣಾಮ ಗ್ರಾಹಕರಿಗೆ ಮಾರಾಟವಾಗುವ ಹಾಲಿನ ದರದ ಮೇಲೂ ಬೀಳುವ ಸಾಧ್ಯತೆ ಇದೆ. ಆದರೆ ₹8ರಷ್ಟು ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರವನ್ನು ಸರ್ಕಾರವೇ ಕೈಗೊಳ್ಳಬೇಕಿದೆ.
ಹೀಗಾಗಿ ಹಾಲಿನ ದರ ಹೆಚ್ಚಳದ ಕುರಿತು ಸರ್ಕಾರದ ಮುಂದಿನ ನಿರ್ಧಾರ ಏನು ಎಂಬುದು ಇದೀಗ ಕುತೂಹಲ ಮೂಡಿಸಿದೆ.
ಸರ್ಕಾರದ ಮೇಲೆ ಒತ್ತಡಕ್ಕೆ ಸಿದ್ಧತೆ
ಹಾಲಿನ ದರ ಹೆಚ್ಚಳಕ್ಕೆ ಸರ್ಕಾರದಿಂದ ಸ್ಪಂದನೆ ಸಿಗದಿದ್ದರೆ, ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಿನ ಹಂತದ ಹೋರಾಟ ನಡೆಸುವ ಸಾಧ್ಯತೆಯೂ ಇದೆ ಎಂದು ಉತ್ಪಾದಕರ ಸಂಘಟನೆಗಳು ಸೂಚಿಸಿವೆ.
ಅಮುಲ್ ಸೇರಿದಂತೆ ವಿವಿಧ ಹಾಲು ಒಕ್ಕೂಟಗಳ ದರ ಪರಿಷ್ಕರಣೆ ಸೇರಿದಂತೆ ಹಲವು ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದಲ್ಲೂ ಹಾಲಿನ ದರ ಹೆಚ್ಚಳಕ್ಕೆ ಅವಕಾಶ ನೀಡಬೇಕು ಎಂಬುದು ಉತ್ಪಾದಕರ ಪ್ರಮುಖ ಬೇಡಿಕೆಯಾಗಿದೆ.
ಹಾಲಿನ ದರ ಏರಿಕೆಯಾದರೆ ಅದರ ಪರಿಣಾಮ ಗ್ರಾಹಕರ ಮೇಲೂ ಬೀಳುವ ಸಾಧ್ಯತೆ ಇರುವುದರಿಂದ, ಸರ್ಕಾರದ ಮುಂದಿನ ನಿರ್ಧಾರ ಕುತೂಹಲ ಮೂಡಿಸಿದೆ.
ಸೆ.19 ರಂದು ಬಳ್ಳಾರಿ ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಇವರ ಸಂಯುಕ್ತ ಆಶ್ರಯದಲ್ಲಿ ಸೆ.19 ರಂದು ಬಳ್ಳಾರಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್’ ನ್ನು ಹಮ್ಮಿಕೊಳ್ಳಲಾಗಿದೆ.
ಈ ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಪರಸ್ಪರ ರಾಜಿಸಂಧಾನದ ಮೂಲಕ ಶೀಘ್ರವಾಗಿ ಮತ್ತು ಉಚಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಉತ್ತಮ ಅವಕಾಶ ಕಲ್ಪಿಸಲಾಗಿದೆ.
ವ್ಯಾಜ್ಯ ಪೂರ್ವ ಪ್ರಕರಣಗಳು, ರಾಜಿ ಮಾಡಿಕೊಳ್ಳಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯ (ಬೌನ್ಸ್) ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಕಲಹಗಳು, ಸಿವಿಲ್ ದಾವೆಗಳು ಮತ್ತು ಇತರೆ ರಾಜಿಯಾಗಬಲ್ಲ ವ್ಯಾಜ್ಯಗಳು ಇತ್ಯರ್ಥಪಡಿಸಿಕೊಳ್ಳಬಹುದಾದ ಪ್ರಕರಣಗಳಾಗಿವೆ.
ನ್ಯಾಯಾಲಯದ ಅಲೆದಾಟ, ಸಮಯ ಮತ್ತು ಹಣದ ವ್ಯಯವನ್ನು ತಪ್ಪಿಸಿ, ಸಾಮರಸ್ಯದೊಂದಿಗೆ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರು, ಕಕ್ಷಿದಾರರು ಈ ರಾಷ್ಟ್ರೀಯ ಲೋಕ್ ಅದಾಲತ್ನ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಸಿದ್ಧಲಿಂಗ ಪ್ರಭು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

