HomeKarnatakaMilk Price Hike : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಶೀಘ್ರದಲ್ಲೇ 'ನಂದಿನಿ' ಹಾಲಿನ ದರ...

Milk Price Hike : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಶೀಘ್ರದಲ್ಲೇ ‘ನಂದಿನಿ’ ಹಾಲಿನ ದರ 5 ರೂ ಹೆಚ್ಚಳ

ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಹಾಲಿನ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ.

ಹಾಲಿನ ದರ ಏರಿಕೆಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ನೇತೃತ್ವದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೋರಿ ಕೆಎಂಎಫ್ ನಿಯೋಗದಿಂದ ಜುಲೈ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಾಲಿನ ದರ 14 ರೂಪಾಯಿಯಷ್ಟು ಕಡಿಮೆ ಇದೆ ಹಾಲಿನ ದರ ಹೆಚ್ಚಳ ಮಾಡಿದ ಕಾರಣ ರೈತರು ಜಿಲ್ಲಾ ಒಕ್ಕೂಟಗಳಿಗೆ ಹಾಲು ಕೊಡಲು ಹಿಂದೇಟು ಹಾಕುತ್ತಿದ್ದು, ಇದರಿಂದ ಪ್ರತಿದಿನ 8 ಲಕ್ಷ ಲೀಟರ್ ನಷ್ಟು ಹಾಲು ಖಾಸಗಿಯವರ ಪಾಲಾಗುತ್ತದೆ ಎಂಬ ಮಾಹಿತಿಯನ್ನು ಸಿಎಂ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.

ಇದೇ ಪರಿಸ್ಥಿತಿ ಮುಂದುವರೆದರೆ ಹಾಲು ಸಂಗ್ರಹ ಕಡಿಮೆಯಾಗುತ್ತದೆ. ರೈತರಿಗೆ ಹೆಚ್ಚು ಹಣ ನೀಡಲು ಹಾಲಿನ ದರ ಹೆಚ್ಚಳಕ್ಕೆ ಅನುಮತಿ ನೀಡಬೇಕೆಂದು ಸಿಎಂಗೆ ಮನವಿ ಮಾಡಲಿದ್ದು, ಜು. 11 ರಂದು ನಿಯೋಗ ತೆರಳಲು ತೀರ್ಮಾನಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular