ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವತಿಯಿಂದ ವಿವಿಧ ವೃಂದದಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಉಪ ವ್ಯವಸ್ಥಾಪಕರು, ಸಹಾಯಕ ವ್ಯವಸ್ಥಾಪಕರು, ತಾಂತ್ರಿಕ ಅಧಿಕಾರಿ, ಮಾರುಕಟ್ಟೆ ಅಧಿಕಾರಿ, ಲೆಕ್ಕಾಧಿಕಾರಿ, ಸಾರ್ವಜನಿಕ ಸಂಪರ್ಕ ಅಧಿಕಾರಿ, ಉಗ್ರಾಣ ಅಧಿಕಾರಿ, ಸಿಸ್ಟಮ್ ಅಧಿಕಾರಿ, ಮಾರುಕಟ್ಟೆ ಅಧೀಕ್ಷಕಕರು, ಖರೀದಿ, ಉಗ್ರಾಣ ಅಧೀಕ್ಷಕರು, ಡೈರಿ ಸೂಪರ್ ವೈಸರ್, ಕ್ಷೇತ್ರ ಸಹಾಯಕರು, ಮಾರುಕಟ್ಟೆ ಸಹಾಯಕ, ಚಾಲಕರು, ಟೆಕ್ನಿಷಿಯನ್, ಆಡಳಿತ ಸಹಾಯಕರು ಸೇರಿದಂತೆ ಒಟ್ಟು 63 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ನೇಮಕಾತಿಯಲ್ಲಿ 371 ಜೆ ಸ್ಥಳೀಯ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸಿದೆ. ನವೆಂಬರ್ 7ರಿಂದ ಡಿಸೆಂಬರ್ 7 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಯೋಮಿತಿ, ವಿದ್ಯಾರ್ಹತೆ, ಮೀಸಲಾತಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನ ಮೊದಲಾದ ಮಾಹಿತಿಗಳನ್ನು ಒಕ್ಕೂಟದ www.rbkmul.in ವೆಬ್ಸೈಟ್ ನಲ್ಲಿ ಪಡೆಯಬಹುದು.

ಅಭ್ಯರ್ಥಿಗಳು ಖುದ್ದಾಗಿ, ಅಂಚೆ ಅಥವಾ ಕೋರಿಯರ್ ಮೂಲಕ ಅರ್ಜಿ ಸಲ್ಲಿಸಲು ಯಾವುದೇ ಅವಕಾಶ ಇರುವುದಿಲ್ಲ. ವೆಬ್ಸೈಟ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read