HomeEntertainment34ನೇ ವಸಂತಕ್ಕೆ ಕಾಲಿಟ್ಟ 'ಮಿಲ್ಕಿ ಬ್ಯೂಟಿ' ತಮನ್ನಾ

34ನೇ ವಸಂತಕ್ಕೆ ಕಾಲಿಟ್ಟ ‘ಮಿಲ್ಕಿ ಬ್ಯೂಟಿ’ ತಮನ್ನಾ

ಸುಮಾರು 18 ವರ್ಷಗಳಿಂದ‌ ಹಿಂದಿ, ತೆಲುಗು ಸೇರಿದಂತೆ ತಮಿಳು ಚಿತ್ರರಂಗದಲ್ಲಿ ತಮ್ಮದೇ ಅದೇ ಆದ ಛಾಪು ಮೂಡಿಸಿರುವ ತಮನ್ನಾ ಭಾಟಿಯಾ ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

2015ರಲ್ಲಿ ತೆರೆಕಂಡ ‘ಚಂದ್ ಸಾ ರೋಷನ್ ಚೆಹರ’ ಎಂಬ ರೋಮ್ಯಾಂಟಿಕ್ ಹಿಂದಿ ಸಿನಿಮಾ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಇವರು, ಅದೇ ವರ್ಷದಲ್ಲಿ ತೆಲುಗಿನ ‘ಶ್ರೀ’ ಚಿತ್ರದಲ್ಲಿ ತೆರೆ ಹಂಚಿಕೊಂಡರು. ನಂತರ ತೆಲುಗು ಹಾಗು ತಮಿಳು ಚಿತ್ರರಂಗದ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಗಾಸ್ಟಾರ್ ಚಿರಂಜೀವಿ ನಟನೆಯ ಭೋಲಾ ಶಂಕರ್ ಸೇರಿದಂತೆ ಜೈಲರ್ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ತಮನ್ನಾ ಇತ್ತೀಚಿಗೆ ‘ಅರಣ್ಮನೈ 4′ ಹಾಗೂ ‘ವೇದ’ ಶೂಟಿಂಗ್ನಲ್ಲಿ ಬಿಜಿಯಾಗಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular