ಮಿಮಿಕ್ರಿ ಮಾಡೋದು ಒಂದು ಕಲೆ, ಬೇಕಿದ್ರೆ ಸಾವಿರ ಬಾರಿ ಮಾಡ್ತೀನಿ : ಮತ್ತೆ ಅಣಕಿಸಿದ ‘ಟಿಎಂಸಿ’ ಸಂಸದ |Watch Video

ನವದೆಹಲಿ : ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ಅನುಕರಣೆ ವಿವಾದವನ್ನು ಹುಟ್ಟುಹಾಕಿದ ನಂತರ, ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಭಾನುವಾರ ರಾಜ್ಯಸಭಾ ಅಧ್ಯಕ್ಷರನ್ನು ಅನುಕರಿಸುವ ಮೂಲಕ ಮತ್ತೊಮ್ಮೆ ಕೆರಳಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆಯಿಂದ ಅಮಾನತುಗೊಂಡ ಬ್ಯಾನರ್ಜಿ ಮಿಮಿಕ್ರಿ ಮಾಡುವುದು ಒಂದು ಕಲೆ, ಅದು ನನ್ನ ಹಕ್ಕು, ಬೇಕಾದರೆ ಸಾವಿರ ಬಾರಿ ಮಾಡುತ್ತೀನಿ ಎಂದರು. ನನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ನನಗೆ ಎಲ್ಲಾ ಹಕ್ಕುಗಳಿವೆ. ನೀವು ನನ್ನನ್ನು ಜೈಲಿಗೆ ಹಾಕಬಹುದು. ಆದರೆ ನಾನು ಇದರಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.

ಕಲ್ಯಾಣ್ ಕಳೆದ ವಾರ ಅಮಾನತುಗೊಂಡ ಸಂಸದರ ಪ್ರತಿಭಟನೆಯ ಸಂದರ್ಭದಲ್ಲಿ ಬ್ಯಾನರ್ಜಿ ಉಪರಾಷ್ಟ್ರಪತಿ ಧನ್ಕರ್ ಅವರನ್ನು ಅನುಕರಿಸಿ ಮಿಮಿಕ್ರಿ ಮಾಡಿದ್ದರು. ಇದನ್ನು ರಾಹುಲ್ ಗಾಂಧಿ ವಿಡಿಯೋ ಮಾಡಿದ್ದರು. ನಂತರ ರಾಜಕೀಯ ವಿವಾದ ಭುಗಿಲೆದ್ದಿತ್ತು. ಮಿಮಿಕ್ರಿ ಮಾಡಿರುವ ಪ್ರಕರಣ ಸಂಬಂಧ ಜಕಲ್ಯಾಣ್ ಬ್ಯಾನರ್ಜಿ ವಿರುದ್ಧ ನವದೆಹಲಿಯ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಾಗಿದೆ.

https://twitter.com/Jayantika_t/status/1738980993858711749?ref_src=twsrc%5Etfw%7Ctwcamp%5Etweetembed%7Ctwterm%5E1738980993858711749%7Ctwgr%5Eb998bfc36bf4339d678f8736e21bdd853866e521%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fcrying-like-a-child-trinamool-mps-swipe-at-veep-amid-mimicry-row%2F

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read