HomeIndiaಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಶಾಲಾ ವಾಚ್ ಮೆನ್ ಅರೆಸ್ಟ್

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಶಾಲಾ ವಾಚ್ ಮೆನ್ ಅರೆಸ್ಟ್

ಮುಂಬೈ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಶಾಲೆಯ ವಾಚ್ ಮೆನ್ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಮುಂಬೈನ ಅಂಧೇರಿ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಕೃತ್ಯದ ವಿಡಿಯೋಗಳನ್ನು ಇಟ್ಟುಕೊಂಡು ಆಕೆಗೆ ಬ್ಲ್ಯಾಕ್ ಮೇಲ್ ಮಾಡಿ ಬೆದರಿಸುತ್ತಿದ್ದ. 13 ವರ್ಷದ ಸಂತ್ರಸ್ತ ಬಾಲಕಿಯನ್ನು ಬೆದರಿಸಿ ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದ. ಬಾಲಕಿ ನಿರಾಕರಿಸಿದ್ದಳು. ಈ ವೇಳೆ ಪದೇ ಪದೇ ಬ್ಲ್ಯಾಕ್ ಮೇಲ್ ಮಾಡತೊಡಗಿದ್ದ .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೋಷಕರಿಗೆ ವಿಷಯ ತಿಳಿಸಿದ ಬಾಲಕಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಳು. ಕ್ಷಿಪ್ರ ಕಾರ್ಯಾಚರಣೆ ಮೂಲಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಹಲವು ಬಾರಿ ಬಲಕಿಗೆ ಕಿರುಕುಳ ನೀಡಿರುವುದು ತನಿಖೆ ವೇಳೆ ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular