HomeKarnatakaಗಣಿ ಇಲಾಖೆಗೆ ಮೇಜರ್ ಸರ್ಜರಿ: ಬರೋಬ್ಬರಿ 160 ಅಧಿಕಾರಿಗಳ ಬೃಹತ್ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಗಣಿ ಇಲಾಖೆಗೆ ಮೇಜರ್ ಸರ್ಜರಿ: ಬರೋಬ್ಬರಿ 160 ಅಧಿಕಾರಿಗಳ ಬೃಹತ್ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಗಣಿ ಇಲಾಖೆಗೆ ರಾಜ್ಯ ಸರ್ಕಾರ​ ಮೇಜರ್​​ ಸರ್ಜರಿ ಮಾಡಿದ್ದು, ಶೇ.80ರಷ್ಟು ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿಗೆ ಶಾಕ್ ನೀಡಿದೆ.

ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಬೀಡು ಬಿಟ್ಟಿದ್ದ ಗಣಿ ಇಲಾಖೆಯ ಬರೋಬ್ಬರಿ 160 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿ ಹೊರಡಿಸಿದೆ. ಇದರಲ್ಲಿ 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು, 6 ಉಪನಿರ್ದೇಶಕರು ಸೇರಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹೆಚ್ಚಿನ ಉಪ ನಿರ್ದೇಶಕರು ತಮ್ಮ ಸ್ವಂತ ಜಿಲ್ಲೆಗಳಲ್ಲಿ ಅಥವಾ ನೆರೆಯ ಜಿಲ್ಲೆಗಳಲ್ಲಿಯೇ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಮುಂದುವರಿದಿದ್ದಾರೆ ಅಥವಾ ಆಡಳಿತಾತ್ಮಕ ಹಾಗೂ ಸಾರ್ವಜನಿಕ ದೂರುಗಳನ್ನು ಎದುರಿಸುತ್ತಿದ್ದಾರೆ. ಇಂತಹ ದೀರ್ಘಕಾಲದ ಕಾರ್ಯಾವಧಿಯು ಸ್ವಹಿತಾಸಕ್ತಿಗಳಿಗೆ ಎಡೆಮಾಡಿಕೊಡುತ್ತದೆ ಹಾಗೂ ಇಲಾಖೆಯ ಘನತೆಗೆ ಧಕ್ಕೆ ತರುವ ಕಾರಣ ಸ್ಥಳೀಯ ಮಟ್ಟದ ಏಕಸ್ವಾಮ್ಯವನ್ನು ಮುರಿಯಲು ಮತ್ತು ಸಾಂಖ್ಯಿಕ ಅಕ್ರಮಗಳನ್ನು ತಡೆಗಟ್ಟಲು, ಇಲಾಖೆಯ ಪ್ರಮುಖ ಆದಾಯ ಸಂಗ್ರಹಣಾ ಕಾರ್ಯಗಳಿಗೆ ಯಾವುದೇ ಅಡಚಣೆಯಾಗದಂತೆ, ವಸ್ತುನಿಷ್ಠತೆ, ಪಾರದರ್ಶಕತೆ ಮತ್ತು ಸಾರ್ವಜನಿಕ ಹೊಣೆಗಾರಿಕೆಯನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿಈ ಕೂಡಲೇ ಜಾರಿಗೆ ಬರುವಂತೆ 160 ಅಧಿಕಾರಿಗಳನ್ನು ವರ್ಗಾವಣೆ ಮಾಡಿರೋದಾಗಿ ಆದೇಶದಲ್ಲಿ ತಿಳಿಸಲಾಗಿದೆ. ವರ್ಗಾಯಿಸಿದ ಹುದ್ದೆಗೆ ತಕ್ಷಣ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಕೇಂದ್ರ ಕಚೇರಿಗೆ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular