HomeIndiaBREAKING: ಹೆದ್ದಾರಿಯಲ್ಲಿ ಮಿನಿ ಬಸ್ ಪಲ್ಟಿ; 15 ಜನರಿಗೆ ಗಂಭೀರ ಗಾಯ

BREAKING: ಹೆದ್ದಾರಿಯಲ್ಲಿ ಮಿನಿ ಬಸ್ ಪಲ್ಟಿ; 15 ಜನರಿಗೆ ಗಂಭೀರ ಗಾಯ

ಕೃಷ್ಣಗಿರಿ: ಹೆದ್ದಾರಿಯಲ್ಲಿ ಮಿನಿ ಬಸ್ ಪಲ್ಟಿಯಾಗಿ ಬಿದ್ದು 15 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಕೃಷ್ಣಗಿರಿ ಹೆದ್ದಾರಿಯಲ್ಲಿ ಚಿನ್ನಾರ್ ಬಳಿ ನಡೆದಿದೆ.

ಹೆದ್ದಾರಿಯಲ್ಲಿ ಪೇಂಟ್ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳಿಗೆ ಬಸ್ ಡಿಕ್ಕಿ ಹೊಡೆದಿದ್ದು, ಬಳಿಕ ಚಾಲಕನ ನಿಯಂತ್ರಣ ತಪ್ಪಿ ಬಸ್ ಬ್ರಿಡ್ಜ್ ಕೆಳಗೆ ಬಿದ್ದಿದೆ. ಅಪಘಾತದಲ್ಲಿ ಪೇಂಟ್ ಕೆಲಸ ಮಾಡುತ್ತಿದ್ದ ಮೂವರು ಸೇರಿ 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಕೃಷ್ಣಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃಷ್ಣಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular